ನಗರದಲ್ಲಿ ಇಂದು ರೇಣುಕಾಚಾರ್ಯರ ಜಯಂತಿ

ನಗರದಲ್ಲಿ ಇಂದು ರೇಣುಕಾಚಾರ್ಯರ ಜಯಂತಿ

ದಾವಣಗೆರೆ, ಮಾ. 11- ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ದಿನಾಂಕ 12 ರ ಬುಧವಾರ ಬೆಳಿಗ್ಗೆ 11.30 ಕ್ಕೆ ನಗರದ ಅಭಿನವ ರೇಣುಕಾ ಮಂದಿರದಲ್ಲಿ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ, ಯುಗಮಾನೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಮಘಟ್ಟದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಜನ ಜಾಗೃತಿ ಧಾರ್ಮಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಮುಷ್ಟೂರಿನ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ.

ತಾವರಕೆರೆ  ಶಿಲಾಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಉಪದೇಶಾಮೃತ ನೀಡಲಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಗೌರವಾಧ್ಯಕ್ಷ ಎಸ್.ಜಿ. ಉಳವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್,  ಶಾಸಕ ಕೆ.ಎಸ್. ಬಸವಂತಪ್ಪ, ದೂಡಾ ಅಧ್ಯಕ್ಷ  ದಿನೇಶ್ ಕೆ.ಶೆಟ್ಟಿ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಡಾ.ಎ.ಹೆಚ್. ಶಿವಯೋಗಿಸ್ವಾಮಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಸುರೇಶ್ ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್,  ಪಾಲಿಕೆ ಆಯುಕ್ತೆ ರೇಣುಕಾ, ಡಾ. ಅಥಣಿ ಎಸ್. ವೀರಣ್ಣ, ಅಣಬೇರು ರಾಜಣ್ಣ, ಬಿ.ಸಿ. ಉಮಾಪತಿ, ಚಂದ್ರಣ್ಣ ಐಗೂರು, ಎನ್.ಎ.ಮುರುಗೇಶ್, ದೇವರಮನಿ ಶಿವಕುಮಾರ್, ಕೆ.ಎಂ.ಸುರೇಶ್, ಬಿ.ಎಂ. ವಾಗೀಶಸ್ವಾಮಿ, ಹೆಚ್.ಎಂ. ರುದ್ರಮುನಿಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಸ್.ಜಿ. ಉಳುವಯ್ಯ, ತ್ಯಾವಣಗಿ ವೀರಭದ್ರಸ್ವಾಮಿ, ಎಂ.ವಿ. ಜಯಪ್ರಕಾಶ್ ಮಾಗಿ, ಎಲ್.ಎಂ. ಆರ್. ಬಸವರಾಜ್, ಸಿದ್ಧಲಿಂಗಪ್ಪ, ಕೆ.ಎಂ. ಪರಮೇಶ್ವಯ್ಯ, ಎಂ.ಬನ್ನಯ್ಯ ಸ್ವಾಮಿ , ವೃಷಭೇಂದ್ರಸ್ವಾಮಿ ಮತ್ತಿತರರಿದ್ದರು. 

error: Content is protected !!