ಶ್ರೀ ಹೊಯ್ಸಳ ವಿದ್ಯಾಸಂಸ್ಥೆಯ ಶ್ರೀ ಮಂಜರಿ ಹನುಮಂತಪ್ಪ ಶಿಕ್ಷಣ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇಂದು ಬೆಳಿಗ್ಗೆ 11ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಹೊಯ್ಸಳ ವಿದಾಸಂಸ್ಥೆ ಅಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ. ರಾಮಪ್ಪ ವಹಸಿಲಿದ್ದು, ವಿದ್ಯಾರ್ಥಿ ಸಂಘದ ರಾಜ್ಯಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ
ಇ.ಎಂ.ಮಂಜುನಾಥ, ದಾವಣಗೆರೆ ವಿಶ್ವವಿದ್ಯಾನಿಲಯದ ಶಿಕ್ಷಣ ನಿಖಾಯ ಮುಖ್ಯಸ್ಥ ಪ್ರೊ. ಕೆ. ವೆಂಕಟೇಶ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ಡಾ. ಈ. ರಾಜೀವ ಉಪಸ್ಥಿತರಿರುವರು.