ದಾವಣಗೆರೆ, ಮಾ.13- ಹೊನ್ನಾಳಿ-ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಕ್ರಷರ್ ಹಾಗೂ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಆರುಂಡಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್‌ಗಳನ್ನು ನಡೆಸುತ್ತಿರುವುದರಿಂದ ಹಲವು ರೀತಿಯ ಸಮಸ್ಯೆ ಗಳು ಎದುರಾಗಿವೆ. ಹಾನಿಯೂ ಸಂಭವಿಸಿವೆ. ಮನೆ ಗಳು ಬಿರುಕು ಬಿಟ್ಟಿವೆ. ಅಂತರ್ಜಲ ಮಟ್ಟ ಕುಸಿತ ಗೊಂಡಿದೆ. ವಾಯುಮಾಲಿನ್ಯದಿಂದಾಗಿ ರೋಗ ರುಜಿನಗಳು ಹರಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಪಶುಸಂಗೋಪನೆ ಕುಂಠಿತಗೊಂಡಿದೆ. ಸ್ಥಳೀಯ ರಿಗೆ ಹಲವು ಸಮಸ್ಯೆಗಳು ಎದುರಾಗಿದ್ದರೂ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್‌ಗಳನ್ನು ನಡೆಸಲಾ ಗುತ್ತಿದೆ. ಜನರ ಆರೋಗ್ಯ ಮತ್ತು ಪರಿಸರ ದೃಷ್ಟಿ ಯಿಂದ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಗೆ ಬೆಂಬಲಿಸಿ ಮಾತನಾಡಿದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಅವರು, ಗ್ರಾಮದ ಜನರಿಗೆ ತೊಂದರೆಯಾಗುತ್ತಿದ್ದರೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿರುವುದು ಆಶ್ಚರ್ಯ ತಂದಿದೆ. ವಾಯು ಮಾಲಿನ್ಯ ಉಂಟಾಗಿದೆ. ಮನೆಗಳು ಬಿರುಕು ಬಿಟ್ಟಿದ್ದು, ಜನರು ಆತಂಕದಲ್ಲಿಯೇ ವಾಸ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಆರುಂಡಿ ಗ್ರಾಮದ ಹಿರಿಯ ಮುಖಂಡರಾದ ಸಿ. ಚಂದ್ರಪ್ಪ, ಶಿವಪ್ಪ, ಸತೀಶಪ್ಪ, ಬಿ.ಆರ್. ಪ್ರಕಾಶ್, ಶ್ರೀನಿವಾಸ್, ರಾಮಚಂದ್ರಪ್ಪ, ವೀರೇಶ್, ಮೂರ್ತೆಪ್ಪ, ಬೀರಪ್ಪ, ನರಸಿಂಹಪ್ಪ, ಸುರೇಶ್, ಕುಮಾರಪ್ಪ, ಹಾಲೇಶಪ್ಪ, ತಿಮ್ಮಣ್ಣ, ತಿಮ್ಮ ಜ್ಜರ ಶ್ರೀನಿವಾಸ್, ಜವಳಿ ಪ್ರಕಾಶ್ ಮತ್ತಿತರರಿದ್ದರು.