ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಐ.ಟಿ.ಐ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ರುದ್ರಪ್ಪ ಪಾಟೀಲ್ ಘನ ಉಪಸ್ಥಿತರಿರುವರು. ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್. ಬಸವಂತಪ್ಪ, ಬಿ. ದೇವೇಂದ್ರಪ್ಪ, ಡಿ.ಜಿ. ಶಾಂತನ ಗೌಡ, ಬಸವರಾಜು ವಿ. ಶಿವಗಂಗಾ, ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್, ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ. ಸಿಇಒ ಸುರೇಶ ಬಿ. ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ, ಐ.ಟಿ.ಐ. ಕಾಲೇಜಿನ ಪ್ರಾಚಾರ್ಯ ಎನ್. ಏಕನಾಥ ಭಾಗವಹಿಸುವರು.