ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನೆ ಕಾರ್ಯಕ್ರಮದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು
ಬಾಳೆಹೊನ್ನೂರು, ಮಾ. 14- ಪ್ರಾರ್ಥನೆ ಮತ್ತು ನಂಬಿಕೆ ಎರಡೂ ಕಣ್ಣಿಗೆ ಕಾಣದಿರ ಬಹುದು. ಆದರೆ ಅಸಾಧ್ಯವಾದು ದನ್ನು ಸಾಧಿಸುವ ಶಕ್ತಿ ಎರಡಕ್ಕೂ ಇದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋ ಮೇಶ್ವರ ಜಗದ್ಗು ರುಗಳು ಅಭಿಪ್ರಾಯಿ ಸಿದರು.
ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾ ಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿ ಮಹಾ ರಥೋತ್ಸವದ ಅಂಗವಾಗಿ ಜರುಗಿದ ವಸಂತೋತ್ಸವ ಮತ್ತು ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನೆ ಪೂಜೆ ನೆರವೇರಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಅಸತ್ಯದಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಸಾವಿಲ್ಲದೆಡೆಗೆ ಮುನ್ನ ಡೆವ ಗುರಿ ಮನುಷ್ಯನ ದಾಗಬೇಕು. ಮೌಲ್ಯಾ ಧಾರಿತ ಜೀವನ ಬದುಕಿಗೆ ಬೆಲೆ ತರುತ್ತದೆ. ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮುಖ್ಯವಾಗಿವೆ ಎಂದು ಹೇಳಿದರು.
ಆಡಿದ ಮಾತು, ಬಿಟ್ಟ ಬಾಣ, ಕಳೆದು ಕೊಂಡ ಸಮಯ, ನಂಬಿಕೆ ಎಂದಿಗೂ ಮರಳಿ ಬರುವುದಿಲ್ಲ. ಅಧರ್ಮ ತಾತ್ಕಾಲಿಕವಾಗಿ ಮೇಲೇರಿದರೂ ಅಂತಿಮವಾಗಿ ಬುಡ ಸಹಿತ ಸರ್ವ ನಾಶವಾಗುತ್ತದೆ. ದೇಹ ಶುದ್ಧಿ, ನುಡಿ ಶುದ್ಧಿ ಮತ್ತು ಮನ ಶುದ್ಧಿ ಇವುಗಳನ್ನು ಸಾಧಿಸಲು ನೆರವಾಗುವುದೇ ನಿಜವಾದ ಧರ್ಮ. ಕೈ ತುಂಬಾ ಕೆಲಸ, ಕಣ್ತುಂಬ ನಿದ್ದೆ, ಮನಸ್ಸು ತುಂಬಾ ನೆಮ್ಮದಿ, ಹೃದಯ ತುಂಬಾ ಪ್ರೀತಿ ಮತ್ತು ಆರೋಗ್ಯ ಭಾಗ್ಯ ಇರುವಂತಹ ಜನರು ಜಗತ್ತಿನಲ್ಲಿ ನಿಜವಾದ ಶ್ರೀಮಂತರು. ಒಳ್ಳೆಯ ಮನಸ್ಸು ಇದ್ದರೆ ಒಳ್ಳೆಯ ದಿನ ಖಂಡಿತಾ ಬಂದೇ ಬರುತ್ತದೆ ಎಂದರು.
ಎಡೆಯೂರು ರೇಣುಕ ಶಿವಾಚಾ ರ್ಯರು, ಮುಕ್ತಿಮಂದಿರ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಸುಳ್ಳ ಶಿವಸಿದ್ಧರಾಮೇಶ್ವರ ಶಿವಾಚಾ ರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು, ಮಳಲಿಮಠದ ಡಾ. ನಾಗಭೂಷಣ ಶಿವಾಚಾರ್ಯರು, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಎಮ್ಮಿಗನೂರು ಮಹಾಂತ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ರಾಯಚೂರು ಶಾಂತಮಲ್ಲ ಶಿವಾಚಾರ್ಯರು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶಿವಾಚಾರ್ಯರು, ನೆಗಳೂರು ಗುರು ಶಾಂತೇಶ್ವರ ಶಿವಾಚಾರ್ಯರು, ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾ ರ್ಯರು ಮೊದಲ್ಗೊಂಡು ಸುಮಾರು 35 ಜನ ವಿವಿಧ ಮಠಾಧೀಶರು ಸುರಗಿ ಸಮಾರಾಧನೆ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಬಂದ ಎಲ್ಲಾ ಭಕ್ತರು ಭದ್ರಾ ನದಿಯಲ್ಲಿ ಮಂಗಲ ಸ್ನಾನ ಮಾಡಿದರು.
ಲಿಂ. ಕೊಂಡಜ್ಜಿ ತೋಟಪ್ಪನವರ ಮಕ್ಕಳಾದ ಹರಿಹರದ ಕೊಂಡಜ್ಜಿ ಪಂಚಾಕ್ಷರಿ ಸಹೋದರರು, ಅಬ್ಬಿಗೇರಿ ಹಿರೇಮಠದ ಶಿಷ್ಯ ಸದ್ಭಕ್ತ ಮಂಡಳಿಯವರು ಅನ್ನ ದಾಸೋಹ ಸೇವೆ ಸಲ್ಲಿಸಿದರು.