ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ವತಿಯಿಂದ ಸರಕು ಮತ್ತು ಸೇವಾ ತೆರಿಗೆ ಮತ್ತು ಆದಾಯ ತೆರಿಗೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಚಾರ್ಟರ್ಡ್ ಅಕೌಂಟೆಂಟ್ಸ್ ಭವನದಲ್ಲಿ ಇಂದು ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ ಕಾರ್ಯ ಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದ್ದು, ನಂತರ ವಿವಿಧ ವಿಷಯಗಳ ಕುರಿತಂತೆ ವಿಚಾರ ಸಂಕಿರಣ ಏರ್ಪಾಡಾಗಿದೆ.