ಹರಪನಹಳ್ಳಿ, ಮಾ.16- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಾಗಳಿ ಗ್ರಾಮದ ಕೆರೆಯಲ್ಲಿ ಭಾನುವಾರ ಬೆಳಗ್ಗೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಕೆರೆಯಲ್ಲಿ ಮೊಸಳೆ ಓಡಾಡುವುದನ್ನು ಗ್ರಾಮಸ್ಥರು ಕಂಡು ಮೊಬೈಲ್‍ನಲ್ಲಿ ಪೋಟೋ, ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಕೆರೆ ಅಕ್ಕಪಕ್ಕದ ರೈತರು, ಕುರಿಗಾಹಿಗಳು ಭಯಗೊಂಡಿದ್ದಾರೆ, ಕೂಡಲೇ ಸಂಬಂಧಪಟ್ಟ ಇಲಾಖೆಯವರು ಮೊಸಳೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.