ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ದಾಮೋದರ ಕೋಡೆ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿದೆ.
ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ವಹಿಸಲಿದ್ದಾರೆ ಎಂದು ಉಪಾ ಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಬಸವರಾಜ್ ಎಸ್ ಹಾಗೂ ಸಹ ಕಾರ್ಯದರ್ಶಿ ಎ.ಎಸ್.ಮಂಜುನಾಥ್ ತಿಳಿಸಿದ್ದಾರೆ.