ದಾವಣಗೆರೆ ಜ. 2- ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸರಿಸಮನಾದ ವೇತನ ಹಾಗೂ ಭತ್ಯೆ, ಖಾಲಿ ಇರುವ 2.65 ಲಕ್ಷ ಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ಪ್ರೊ ಎನ್. ಲಿಂಗಣ್ಣ ಹಾಗೂ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಹಾಗೂ ಸಂಘದ ಪದಾಧಿಕಾರಿಗಳು, ನಿರ್ದೇಶಕರು ನಾಮನಿರ್ದೇಶಿತ ಸದಸ್ಯರು, ವೃತ್ತಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.
January 1, 2025