ಮಲೇಬೆನ್ನೂರಿನಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್‌

ಮಲೇಬೆನ್ನೂರು, ಜ.11- ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ವಿರುದ್ಧ ಹೋರಾಟ ಮಾಡುವ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಈ ವೇಳೆ ವೈದ್ಯಾಧಿಕಾರಿ ಡಾ. ಲಕ್ಷ್ಮಿದೇವಿ, ಡಾ. ನಿಸಾರ್‌ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಬೂಸ್ಟರ್‌ ಡೋಸ್‌ ಲಸಿಕೆ ಪಡೆದುಕೊಂಡರು.

ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸದ್ಯ 95 ಜನರಿಗೆ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ಬೂಸ್ಟರ್‌ ಡೋಸ್‌ ಹಾಕಲಾಗುವು ದೆಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ವಿ. ಹೊರಕೇರಿ ತಿಳಿಸಿದರು.

ತಾ. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ, ಹಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ ಸುಧಾ ಸುಲಾಕೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!