ಹೋಟೆಲ್, ರೆಸಾರ್ಟ್‌ಗಳಿಗೆ ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ

ದಾವಣಗೆರೆ ಜ. 17 – ಕೋವಿಡ್-19 ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ 2021-22ನೇ ಸಾಲಿನ ಹಣಕಾಸು ವರ್ಷದಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 50 ರಷ್ಟು ರಿಯಾಯಿತಿ ಹಾಗೂ 3 ತಿಂಗಳ ವಿದ್ಯುಚ್ಛಕ್ತಿ ಡಿಮ್ಯಾಂಡ್/ ಫಿಕ್ಸೆಡ್ ಡೆಪಾಸಿಟ್ ಮನ್ನಾ ಸೌಲಭ್ಯವನ್ನು ಸರ್ಕಾರದಿಂದ ಘೋಷಿಸಲಾಗಿದ್ದು, ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಸೂಚನೆ ನೀಡಿದೆ.

ಸರ್ಕಾರ ಘೋಷಿಸಿರುವ ರಿಯಾಯಿತಿ ಸೌಲಭ್ಯ ಪಡೆಯಲು, ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದಿರುವ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್‍ಗಳ ಉದ್ದಿಮೆದಾರರು, ಟೂರ್ಸ್ ಅಂಡ್ ಟ್ರಾವೆಲ್ಸ್ ಆಪರೇಟರ್ಸ್, ಕೆಟಿಟಿಎಫ್ (ಕರ್ನಾಟಕ ಟೂರಿಸಂ ಟ್ರೇಡ್ ಫೆಸಿಲಿಟೇಶನ್) ಆಕ್ಟ್ ನ ಪ್ರಕರಣ ಸಂಖ್ಯೆ 8/1 ಅನ್ವಯ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ https://kttf.karnatakatourism.org ನಲ್ಲಿ ಕಡ್ಡಾಯವಾಗಿ ನೋಂದಾಯಿಸಿ ಪ್ರಮಾಣ ಪತ್ರವನ್ನು ಪಡೆಯಬೇಕಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರೈಲ್ವೆ ನಿಲ್ದಾಣ ಪಕ್ಕ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ದಾವಣಗೆರೆ, ದೂರವಾಣಿ ಸಂಖ್ಯೆ; 08192-230123 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

error: Content is protected !!