ಮತೀಯ-ಜಾತಿ ಆಧಾರಿತ ದೌರ್ಜನ್ಯ ನಿಷೇಧ ಕಾಯ್ದೆ ಜಾರಿಯಾಗಲಿ
ರಾಜ್ಯದಲ್ಲಿ ಧರ್ಮ, ಜಾತಿ, ಲಿಂಗ, ಭಾಷೆಯ ತಾರತಮ್ಯ ಕೊನೆಯಾಗಿಸಲು ಮತ್ತು ಶಾಂತಿ, ಸೌಹಾರ್ದತೆ ಶಾಶ್ವತವಾಗಿ ನೆಲೆಗೊಳ್ಳುವಂತೆ ಮಾಡಲು ಶಿಕ್ಷಣ ಸಂಸ್ಥೆ ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಮೂಲಕ ವಿಶೇಷ ಜನಜಾಗೃತಿ ಅಭಿಯಾನ ನಡೆಸಬೇಕು. ಮತೀಯ ದ್ವೇಷ ಹಾಗೂ ಕೋಮುಗಲಭೆಗಳಲ್ಲಿ ಆಸ್ತಿ- ಪಾಸ್ತಿ ಹಾನಿಗೆ 2 ಸಾವಿರ ಕೋಟಿ ನಿಗದಿ ಮಾಡಬೇಕು. ಮತೀಯ ಹಾಗೂ ಜಾತಿ ಆಧಾರಿತ ದೌರ್ಜನ್ಯ ನಿಷೇಧ ಕಾಯ್ದೆ ಜಾರಿಗೊಳಿಸಬೇಕು.
– ಅಪ್ಸರ್ ಕೊಡ್ಲಿಪೇಟೆ
ದಾವಣಗೆರೆ, ಫೆ.11- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇದೇ ದಿನಾಂಕ 14ರಂದು 2022-23ನೇ ಸಾಲಿನ ಬಜೆಟ್ ಮಂಡಿಸಲಿ ದ್ದಾರೆ. ಈ ಬಜೆಟ್ ಜನಪರ ವಾಗಿರಬೇಕು ಹಾಗೂ ಬಡವರು, ಮಧ್ಯಮವರ್ಗ ಪರಿ ಶಿಷ್ಟ ಜಾತಿ, ವರ್ಗಗಳು ಹಾಗು ಹಿಂದುಳಿದ ವರ್ಗ ಗಳು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲಾ ವರ್ಗದವರಿಗೆ ಅನುಕೂಲವಾಗಿರಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ಅಂಗನವಾಡಿಯಿಂದ ಉನ್ನತ ವ್ಯಾಸಂಗದವರೆಗೂ ಏಕರೂಪ ವಾದ ಮತ್ತು ಸಂಪೂರ್ಣ ಉಚಿತ ವಾದ ಶಿಕ್ಷಣ ವ್ಯವಸ್ಥೆ ಜಾರಿಯಾಗ ಬೇಕು. ಕರ್ನಾಟಕಕ್ಕೆ ಕನಿಷ್ಠ 30 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡ ಬೇಕು. ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಅಮೆರಿಕೆಯ ಮಾದರಿಯಲ್ಲಿ ಕರ್ನಾಟಕದಲ್ಲಿ ಏರೋಸ್ಪೇಸ್ ಮತ್ತು ಏರೋನಾ ಟಿಕಲ್ ಸಂಶೋಧನಾ ಕೇಂದ್ರದ ಸ್ಥಾಪನೆ. ಶಹೀದ್ ಟಿಪ್ಪುಸುಲ್ತಾನ್ ಹೆಸರಿನಲ್ಲಿ ಅಧ್ಯಯನ ಕೇಂದ್ರ ಅಥವಾ ವಿಶ್ವವಿದ್ಯಾಲಯ ಸ್ಥಾಪನೆ. ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಇಲ್ಲದ ಜಿಲ್ಲೆಗಳಲ್ಲಿ, ಸರ್ಕಾರಿ ವೈದ್ಯಕೀಯ ಮಹಾ ವಿದ್ಯಾಲಯ ಸ್ಥಾಪಿಸಬೇಕು ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯ ದರ್ಶಿ ಅಪ್ಸರ್ ಕೊಡ್ಲಿಪೇಟೆ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಬೇಕು. ಉರ್ದು ಯೂನಿವರ್ಸಿಟಿಯನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಲು ಕ್ರಮ ವಹಿಸಬೇಕು.
ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ ನೀಡಬೇಕು. ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿ ಬಿಡುಗಡೆ ಮಾಡಬೇಕು. ಪೆಟ್ರೋಲ್ ಮತ್ತು ಡೀಸೆಲ್ ಇವೆರಡನ್ನೂ ಜಿಎಸ್ಟಿ ವ್ಯಾಪ್ತಿಗೆ ತರಲು ಕೇಂದ್ರಕ್ಕೆ ಒತ್ತಾಯಿಸಬೇಕು ಎಂಬ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಗೋಷ್ಠಿಯಲ್ಲಿ ಇಸ್ಮಾಯಿಲ್ ಜಬೀವುಲ್ಲಾ ರಿಜ್ವಿ ರಿಯಾಜ್ ಅಹ್ಮದ್, ಸೈಯದ್ ಅಶ್ಫಾಕ್, ಎ.ಆರ್.ತಾಹೀರ್, ದಾದಾಪೀರ್, ಎಂ. ಸಾದಿಕ್ ಇದ್ದರು.