ರಜೆ ಅವಧಿ ವಿಸ್ತರಣೆ: ಶೈಕ್ಷಣಿಕ ಬಿಕ್ಕಟ್ಟಿಗೆ ಸರ್ಕಾರವೇ ನೇರ ಹೊಣೆ

ದಾವಣಗೆರೆ, ಫೆ.11- ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯವು ಅಂತಿಮ ತೀರ್ಪನ್ನು ಮುಂದೂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಾಲೇಜು ರಜೆಯ ಅವಧಿಯನ್ನೂ ಸಹ ಮುಂದೂಡಿದೆ. ಇದರಿಂದ ಏರ್ಪಡುವ ಶೈಕ್ಷಣಿಕ ಬಿಕ್ಕಟ್ಟಿಗೆ ಸರ್ಕಾರವೇ ನೇರ ಹೊಣೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾ ಸಮಿತಿಯಿಂದ ನಗರದ ಹೈಸ್ಕೂಲ್ ಮೈದಾನದಲ್ಲಿ ಇಂದು ಅಸಮಾಧಾನ ವ್ಯಕ್ತಪಡಿಸಲಾಯಿತು.

ಸರ್ಕಾರವು ಹಿಜಾಬ್ ಸುತ್ತುವರಿದ ವಿಚಾರವನ್ನು ಸರಿಯಾಗಿ ನಿರ್ವಹಣೆ ಮಾಡದೆ, ಈಗ ಕಾಲೇಜುಗಳ ಆರಂಭವನ್ನು ಮತ್ತಷ್ಟು ವಿಸ್ತರಣೆ ಮಾಡಿರುವುದು ರಾಜ್ಯದ ವಿದ್ಯಾರ್ಥಿಗಳಲ್ಲಿ ಅತೀವ ಆತಂಕ ಸೃಷ್ಟಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯವು ಶಾಲಾ-ಕಾಲೇಜುಗಳನ್ನು ತೆರೆಯಲು ಆದೇಶ ನೀಡಿದ್ದರೂ ರಾಜ್ಯ ಸರ್ಕಾರವು ಅದಕ್ಕೆ ವ್ಯತಿರಿಕ್ತವಾಗಿ ಕಾಲೇಜುಗಳನ್ನು ತೆರೆಯದೇ ರಜೆಯ ಅವಧಿಯನ್ನು ವಿಸ್ತರಿಸಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ ಪ್ರಸ್ತುತ ಶೈಕ್ಷಣಿಕ ವರ್ಷ ಬಹಳ ತಡವಾಗಿ ಆರಂಭವಾಗಿತ್ತು. ಕಾರಣ ಪಾಠಗಳು ಸಹ ಪೂರ್ಣಗೊಂಡಿಲ್ಲ. ಆದರೆ, ಈಗಾಗಲೇ ಹಲವು ಕೋರ್ಸ್‍ಗಳ ಅಂತಿಮ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಇವೆಲ್ಲವೂ ವಿದ್ಯಾರ್ಥಿಗಳ ಮೇಲೆ ಅಪಾರವಾದ ಒತ್ತಡವನ್ನು ಹೇರಿವೆ. ಇಂತಹ ಸಂದರ್ಭದಲ್ಲಿ ಕಾಲೇಜು ರಜೆಯ ಅವಧಿಯನ್ನು ವಿಸ್ತರಣೆ ಮಾಡುತ್ತಾ ಹೋದರೆ ಇನ್ನಷ್ಟು ಶೈಕ್ಷಣಿಕ ಬಿಕ್ಕಟ್ಟು ನಿರ್ಮಾಣವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.

ಕಾಲೇಜು ತೆರೆಯುವುದು ಮುಂದಕ್ಕೆ ಹೋದಂ ತೆಲ್ಲ ಪರೀಕ್ಷೆಗಳನ್ನು ಮುಂದೂಡುವ ಪರಿಸ್ಥಿತಿ ಬರು ತ್ತದೆ. ಕಾಲೇಜು ಆರಂಭದ ಅವಧಿ ವಿಸ್ತರಣೆ ಹಿನ್ನೆಲೆ ಯಲ್ಲಿ ಏರ್ಪಡುವ ಎಲ್ಲ ಶೈಕ್ಷಣಿಕ ಸಮಸ್ಯೆಗಳಿಗೆ ಸರ್ಕಾರವೇ ಸಂಪೂರ್ಣ ಜವಾಬ್ದಾರಿ ವಹಿಸಿ ಸಮಸ್ಯೆ ಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!