ಮಲೇಬೆನ್ನೂರಿಗೆ ಡಿಸಿ, ಎಸ್ಪಿ ಭೇಟಿ : ನಿಷೇಧಾಜ್ಞೆ ಪರಿಶೀಲನೆ

ಮಲೇಬೆನ್ನೂರು, ಫೆ.11- ಪಟ್ಟಣದಲ್ಲಿ 144ನೇ ಸೆಕ್ಷನ್ ಜಾರಿಯಾಗಿರುವುದನ್ನು ಶುಕ್ರವಾರ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಎಸ್ಪಿ ರಿಷ್ಯಂತ್ ಅವರು ಖುದ್ದು ಭೇಟಿ ನೀಡಿ ವೀಕ್ಷಿಸಿದರು. ಜಾಮೀಯಾ ಮಸೀದಿಗೆ ತೆರಳಿ ಎಷ್ಟು ಜನ ಪ್ರಾರ್ಥನೆ ಮಾಡುತ್ತಿದ್ದಾರೆಂಬುದನ್ನು ಪರಿಶೀಲಿಸಿ, ಜಿಲ್ಲಾಡಳಿತದ ನಿಷೇಧಾಜ್ಞೆಯನ್ನು ಪಾಲಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಸದ್ಯದ ಪರಿಸ್ಥಿತಿಯ ಬಗ್ಗೆ ಸಿಪಿಐ ಸತೀಶ್, ಪಿಎಸ್ಐ ರವಿಕುಮಾರ್ ಅವರಿಂದ ಮಾಹಿತಿ ಪಡೆದರು. ಈ ವೇಳೆ ಪತ್ರಕರ್ತ ರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಯುವಕರು ಜವಾಬ್ದಾರಿ ಯಿಂದ ನಡೆದುಕೊಳ್ಳಬೇಕು. ಕೈಯಲ್ಲಿ ಮೊಬೈಲ್ ಇದೆ ಎಂದು ಕೈಸಿಕ್ಕ ಪ್ರಚೋದನಕಾರಿ ಚಿತ್ರಗಳನ್ನು ಪೋಸ್ಟ್ ಮಾಡಿದರೆ ಎಷ್ಟು ತೊಂದರೆ ಆಗುತ್ತದೆ ಎಂಬುದನ್ನು ಅರಿತುಕೊಳ್ಳಬೇಕು. ಮುಂದೆ ಯಾರಾದರೂ ಈ ರೀತಿ ಮಾಡಿದರೆ ಕಠಿಣ ಶಿಕ್ಷೆ ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ, ಉಪತಹಶೀಲ್ದಾರ್ ಆರ್.ರವಿ, ಕಂದಾಯ ನಿರೀಕ್ಷಕ ಸಮೀರ್, ಮುಖಂಡ ಎಂ.ಬಿ.ಫೈಜು ಮತ್ತಿತರರು ಈ ವೇಳೆ ಹಾಜರಿದ್ದರು.

error: Content is protected !!