ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಶಾಸಕ ರೇಣುಕಾಚಾರ್ಯ ಭರವಸೆ
ಹೊನ್ನಾಳಿ, ಫೆ.14- ಅವಳಿ ತಾಲ್ಲೂಕು ಗಳನ್ನು ರಾಜ್ಯದಲ್ಲೇ ಮಾದರಿ ತಾಲ್ಲೂಕು ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯ ದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ 518 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ ಎಂದ ಶಾಸಕರು, 25 ಕೋಟಿ ವೆಚ್ಚದಲ್ಲಿ ಅಲಂಕಾರಿಕ ದೀಪಗಳ ಜೊತೆಗೆ ರಸ್ತೆ ಅಭಿವೃದ್ದಿ ಕಾಮಗಾರಿ ಪ್ರಗತಿಯಲ್ಲಿದ್ದು, ಅವಳಿ ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಲ್ಲೂ ಅಭಿವೃದಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಪ್ರಕಾಶ್, ರಮೇಶ್, ಪ್ರಭು, ತೀರ್ಥಪ್ಪ, ತಾ.ಪಂ ಮಾಜಿ ಸದಸ್ಯ ಮಹೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.