ಮಲೇಬೆನ್ನೂರು, ಫೆ.23- ಕುಣಿಬೆಳಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಮಹಾದ್ವಾರ ಉದ್ಘಾಟನೆ ಹಾಗೂ ಗೋಪುರದ ಕಳಸಾರೋಹಣ ಮತ್ತು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಉತ್ಸವವನ್ನು ನಾಡಿದ್ದು ದಿನಾಂಕ 25ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಭೋವಿ ಅಂಜಿನಪ್ಪ, ಗ್ರಾಮದ ಮುಖಂಡ ಚನ್ನಪ್ಪ ಗೌಡ್ರು ತಿಳಿಸಿದ್ದಾರೆ.
ಮಂಗಳವಾರ ಪಟ್ಟಣದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಅಂದು ಬೆಳಿಗ್ಗೆ 12.30ಕ್ಕೆ ಜರುಗುವ ಜನಜಾಗೃತಿ ಧಾರ್ಮಿಕ ಸಮಾರಂಭದ ದಿವ್ಯ ನೇತೃತ್ವವನ್ನು ಶ್ರೀಮದ್ ರಂಭಾಪುರಿ ಜಗದ್ಗುರುಗಳು ವಹಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿ ಉಪಾಧ್ಯಕ್ಷ ಸುಂಕದರ ನಿಂಗಪ್ಪ, ಮಡಿವಾಳರ ಮಲ್ಲೇಶಪ್ಪ ತಿಳಿಸಿದ್ದಾರೆ.