ಉಕ್ರೇನ್‌ನಲ್ಲಿ ಸಿಲುಕಿರುವ ನಗರದ ಆರು ಜನರ ರಕ್ಷಣೆ ನಮ್ಮ ಹೊಣೆ

ದಾವಣಗೆರೆ, ಫೆ. 25- ಉಕ್ರೇನ್ ಹಾಗೂ ರಷ್ಯಾ ನಡುವೆ ಪ್ರಾರಂಭವಾಗಿರುವ ಯುದ್ಧದ ಪರಿಣಾಮ ಉಕ್ರೇನ್‌ನಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ.

ಉಕ್ರೇನ್‌ಗೆ ತೆರಳಿದ್ದ ದಾವಣಗೆರೆ ಜಿಲ್ಲೆಯ ಆರು ಜನರು ಆತಂಕಗೊಂಡಿದ್ದು, ತಾಯ್ನಾಡಿಗೆ ಮರಳಲು ಸಾಕಷ್ಟು ಪ್ರಯಾಸ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಡಾ. ಅಶೋಕ್, ಸೈಯದ್ ಹಬೀಬ್, ಪ್ರಿಯಾ, ಮೊಹಮ್ಮದ್ ಹಬೀದ್ ಅಲಿ ಸೇರಿದಂತೆ ಆರು ಜನರನ್ನು ಸುರಕ್ಷಿತವಾಗಿ ಕರೆತರಲು ಅಗತ್ಯವಾದ ಎಲ್ಲಾ ಪ್ರಯತ್ನ ಗಳನ್ನು ಮಾಡಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.

ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ರಾಜ್ಯ ಸಚಿವರಾದ ವಿ. ಮುರುಳೀಧರನ್, ಮೀನಾಕ್ಷಿ ಲೇಖಿ, ಡಾ. ರಾಜಕುಮಾರ್ ರಂಜನ್ ಸಿಂಗ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪೋಷಕರು ಹಾಗೂ ಕುಟುಂಬದವರು ಆತಂಕಕ್ಕೊಳಗಾಗುವುದು ಬೇಡ. ಉಕ್ರೇನ್‌ನಲ್ಲಿ ಸಿಲುಕಿರುವ ಜಿಲ್ಲೆಯ ಜನರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಸಿದ್ದೇಶ್ವರ ತಿಳಿಸಿದ್ದಾರೆ.

error: Content is protected !!