ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ದಾವಣಗೆರೆ, ಮಾ. 1-  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ಆಯೋಜಿಸಿದ್ದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಿಸಲಾಯಿತು. ಅಪರ ಜಿಲ್ಲಾಧಿ ಕಾರಿ  ಪೂಜಾರ ವೀರಮಲ್ಲಪ್ಪ ಅವರು, ಮಹನೀ ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಪೊಲೀಸ್ ಉಪ ಅಧೀಕ್ಷಕ ನರಸಿಂಹ ವಿ ತಾಮ್ರಧ್ವಜ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ರವಿ, ಪರಿಶಿಷ್ಟ ವರ್ಗಗಳ ಇಲಾಖೆಯ ಮಂಜುನಾಥ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಮಿತ್ ಬಿದರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ರಂಗಪ್ಪ, ಪಶುಪಾಲನಾ ಇಲಾಖೆಯ ಡಾ.ಚಂದ್ರಶೇಖರ ಸುಂಕದ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೀಶ್, ಹಿರಿಯ ಕಲಾವಿದ ಹಾಗೂ ದಲಿತ ಸಂಘಟನೆಯ ಮುಖಂಡ
ಹೆಗ್ಗೇರೆ ರಂಗಪ್ಪ, ಹಿರಿಯ ಕಲಾವಿದ ಹಾಗೂ ಛಲವಾದಿ ಸಮಾಜದ ತಾಲ್ಲೂಕು ಅಧ್ಯಕ್ಷ ಹಾಲೇಶ್,  ಮಂಜುನಾಥ್, ಪರಮೇಶ್ ಹಾಗೂ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

error: Content is protected !!