ದೇವರಬೆಳಕೆರೆಯಲ್ಲಿ ಪಲ್ಸ್ ಪೋಲಿಯೋ ಜಾಥಾ

ಮಲೇಬೆನ್ನೂರು, ಫೆ. 25- ಇದೇ ದಿನಾಂಕ 27 ರ ಭಾನುವಾರ ಎಲ್ಲಾ ಕಡೆ ನಡೆಯಲಿರುವ  ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಯುಕ್ತ ದೇವರಬೆಳಕೆರೆಯಲ್ಲಿ ಶುಕ್ರವಾರ ಶಾಲಾ ವಿದ್ಯಾರ್ಥಿಗಳಿಂದ  ಜಾಥಾ ಕಾರ್ಯಕ್ರಮ ನಡೆಸಲಾಯಿತು.

ಹರಿಹರ ತಾಲ್ಲೂಕು ಆರೋಗ್ಯಾಧಿಕಾರಿ   ಡಾ. ಚಂದ್ರಮೋಹನ್ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.  ಗ್ರಾ.ಪಂ ಅಧ್ಯಕ್ಷರಾದ ಗೀತಾ ಪರಶುರಾಮ್, ತಾ. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ, ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ
ಡಾ. ರಮೇಶ್, ಗ್ರಾ.ಪಂ ಅಧಿಕಾರಿ ಬಿರಾದಾರ್ ಮತ್ತು ಗ್ರಾ.ಪಂ ಸದಸ್ಯರು, ಪ್ರಾ.ಆ.ಕೇಂದ್ರದ ಸಿಬ್ಬಂದಿ ವರ್ಗದವರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.

error: Content is protected !!