ಪರಿಶಿಷ್ಟರ ಮೀಸಲಾತಿ ಹೆಚ್ಚಳಕ್ಕಾಗಿ ಇಂದು ಪ್ರತಿಭಟನೆ

ಹರಿಹರ, ಮಾ. 7 – ಪರಿಶಿಷ್ಟ ಜಾತಿ,  ಪಂಗಡಗಳ ಮೀಸಲಾತಿ ಹೆಚ್ಚಿಸುವಲ್ಲಿ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾ ಸ್ವಾಮಿಗಳು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸದೇ ಇರುವುದರ ವಿರುದ್ಧ ನಾಳೆ ಮಂಗಳವಾರ ಬೆಳಗ್ಗೆ 11 ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಹರಿಹರ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ನಗರ ಘಟಕದ ಅಧ್ಯಕ್ಷ ಕೆ.ಬಿ. ಮಂಜುನಾಥ್ ತಿಳಿಸಿದ್ದಾರೆ.

ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣದಲ್ಲಿ  ಇಂದು ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಹರಿಹರ ತಾಲ್ಲೂಕು ಪರಿಶಿಷ್ಟ ಜಾತಿ, ಪಂಗಡದವರು ನಗರದ ನೀರಾವರಿ ಇಲಾಖೆಯಿಂದ ಬೃಹತ್ ಪ್ರತಿಭಟನೆ ಮಾಡಿ ತಹಶೀಲ್ದಾರ್‌ ಕಚೇರಿಗೆ ತೆರಳಿ ಮನವಿಯನ್ನು ತಹಶೀಲ್ದಾರ್‌ರವರಿಗೆ ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಘಟಕದ ಅಧ್ಯಕ್ಷ ಜಿಗಳಿ ರಂಗಪ್ಪ, ನಗರಸಭೆ ಸದಸ್ಯ ದಿನೇಶ್ ಬಾಬು, ಮಾಜಿ ಸದಸ್ಯ ಹಂಚಿನ ನಾಗಪ್ಪ, ಜಿಗಳಿ ಆನಂದಪ್ಪ, ಪಾರ್ವತಿ, ಮಕರಿ ಪಾಲಾಕ್ಷಪ್ಪ, ಬಸವರಾಜ್, ಮಹಾಂತೇಶ್, ಆಟೋ ರಾಜು, ಜಿಗಳಿ ಪ್ರಕಾಶ್, ಧನ್ಯರಾಜ್, ವೆಂಕಟೇಶ, ಭರತ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!