ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಲು ಕರೆ

ಜಗಳೂರಿನಲ್ಲಿ ವಿದ್ಯಾಗಮ-2ಕ್ಕೆ ಜಿ.ಪಂ ಅಧ್ಯಕ್ಷೆ ಶಾಂತಕುಮಾರಿ ಚಾಲನೆ

ಜಗಳೂರು, ಜ.1- ಶಿಕ್ಷಣ ಸಚಿವರ ಹಾಗೂ ಶಿಕ್ಷಣ ತಜ್ಞರ ಸಲಹೆಯಂತೆ ಮುಂಜಾಗ್ರತಾ ಕ್ರಮಗಳೊಂದಿಗೆ ವಿದ್ಯಾಗಮ ಯೋಜನೆ ಆರಂಭವಾಗಿದ್ದು, ಪೋಷಕರು ಭಯಪಡದೆ ಸರ್ಕಾರದ ಜೊತೆ ಕೈಜೋಡಿಸಿ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಕೈಜೋಡಿಸಬೇಕು ಎಂದು ಜಿಪಂ ಅಧ್ಯಕ್ಷೆ  ಶಾಂತಕುಮಾರಿ ಮನವಿ ಮಾಡಿದರು. 

ತಾಲ್ಲೂಕಿನ ಬಿಳಿಚೋಡು ಗ್ರಾಮದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿದ್ಯಾಗಮ-2 ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ದೇಶಾದಾದ್ಯಂತ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ನಿಂದ ಪರೀಕ್ಷೆಗಳನ್ನೊಳಗೊಂ ಡಂತೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದ್ದು ಇದೀಗ ಶಾಲೆಗಳು ಆರಂಭವಾಗಿವೆ. ಮಕ್ಕಳು ಉತ್ಸಾಹದಿಂದ ಶಾಲೆಗೆ ಬರುತ್ತಿದ್ದಾರೆ ಎಂದರು.

ಬಿಳಿಚೋಡು ಗ್ರಾಮದ ಸರ್ಕಾರಿ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸಲು ಅಗತ್ಯ ನೆರವು ಕಲ್ಪಿಸಿಕೊಡುವುದಾಗಿ ಜಿ.ಪಂ. ಅಧ್ಯಕ್ಷೆ ಶಾಂತಕುಮಾರಿ ಭರವಸೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ವೆಂಕಟೇಶ್ ಮಾತನಾಡಿ, ಸರ್ಕಾರ ಪುನಃ ವಿದ್ಯಾಗಮ ಯೋಜನೆಯಡಿ ಶಾಲೆ ಆರಂಭಿಸಲು ಅನುಮತಿ ನೀಡಿದ್ದು ಮಾರ್ಗಸೂಚಿಯಂತೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಶಿಕ್ಷಕರು, ಮಕ್ಕಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಸ್ಯಾನಿಟೈಸರ್ ಮಾಸ್ಕ್ ಬಳಕೆ ಮಾಡಬೇಕು. ಸಾಧ್ಯವಿದ್ದಷ್ಟು ಸ್ಮಾರ್ಟ್ ಕ್ಲಾಸ್ ಆನ್‌ಲೈನ್‌ನಲ್ಲಿ ಮಾಹಿತಿ ಪಾಠ ಪ್ರವ ಚನ ನೀಡಲಾಗುತ್ತಿದೆ. ಪೋಷಕರು  ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾ.ಪಂ ಇಓ ಮಲ್ಲಾನಾಯ್ಕ, ಟಿಪಿಓ ವೆಂಕಟೇಶ್, ಇಸಿಓ ಮಂಜಣ್ಣ, ಮುಖ್ಯಶಿಕ್ಷಕರಾದ ಈರಮ್ಮ, ಆನಂದಪ್ಪ, ಶಿಕ್ಷಕ ಬಸವರಾಜ್,  ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸುಧೀರ್ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!