ಮಲೇಬೆನ್ನೂರು, ಜ.2- ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಕಡೇ ಕಾರ್ತಿಕೋತ್ಸವವನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ದೇವಸ್ಥಾನ ಆವರಣದಲ್ಲಿ ಭಕ್ತರು ಸಾವಿರಾರು ದೀಪಗಳನ್ನು ಹಚ್ಚಿ ಭಕ್ತಿ ಸಮರ್ಪಿಸಿದರು. ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.
January 10, 2025