ಹರಪನಹಳ್ಳಿ, ಜ.10- ಗ್ರಾಮ ಪಂಚಾಯತಿ ಮಕ್ಕಳ ಸ್ನೇಹಿ ಅಭಿಯಾನ ಕಾರ್ಯಕ್ರಮವನ್ನು ಎಲ್ಲಾ ಶಾಲೆಗಳಲ್ಲಿ ಅಳವಡಿಸುವಂತೆ ಎಂದು ಬಿಆರ್‌ಪಿ ನಾಗರಾಜ್ ಹೇಳಿದ್ದಾರೆ.
ತಾಲ್ಲೂಕಿನ ಹೊಸಕೋಟೆ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನದಡಿ ಸಮುದಾಯ ಆಧಾರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳನ್ನು ಪೋಷಕರು ಶಾಲೆಯನ್ನು ಅರ್ಧಕ್ಕೆ ಬಿಡಿಸಿ ಬಾಲ್ಯ ವಿವಾಹದಂತಹ ತಪ್ಪು ಮಾಡುತ್ತಾರೆ. ಏನೂ ತಿಳಿಯದ ಮಗುವನ್ನು ಸಂಕಷ್ಟಕ್ಕೆ ದೂಡುತ್ತಾರೆ. ಇಂತಹ ದುಷ್ಟ ಪರಿಣಾಮದಿಂದ ಆಗುವ ಅನಾಹುತಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಕಾನೂನು ಮತ್ತು ಕಾಯ್ದೆ ಬಗ್ಗೆ ಪೋಷಕರಿಗೆ ತಿಳುವಳಿಕೆ ನೀಡಬೇಕು. ಸಮುದಾಯ ಆಧಾರಿತ ಕಾರ್ಯಕ್ರಮ ಮತ್ತು ಓದು ಬೆಳಕು ಕಾರ್ಯಕ್ರಮದಡಿಯಲ್ಲಿ ವಿವಿಧ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು.
ಅಣಜಿಗೇರಿ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಿಆರ್‌ಪಿ ಪರಶುರಾಮಪ್ಪ ಮತ್ತಿತರರು ಭಾಗವಹಿಸಿದ್ದರು.