ದಾವಣಗೆರೆ, ಜ.20- ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘದಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಪಿಂಜಾರ/ನದಾಫ್ ಜನಾಂಗದ ಅಭಿವೃದ್ಧಿಗೆ ರಾಜ್ಯಮಟ್ಟದ ಅಭಿವೃದ್ಧಿ ನಿಗಮ/ಮಂಡಳಿ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಅರ್ಪಿಸಿದ್ದು, ಸರ್ಕಾರ ಗಂಭೀರ ವಾಗಿ ಪರಿಗಣಿಸಿಲ್ಲ ಎಂದು ಜಿಲ್ಲಾಧ್ಯಕ್ಷ ಜೆ.ಹೆಚ್. ಉಕ್ಕಡಗಾತ್ರಿ ಅಸಮಾಧಾನ ವ್ಯಕ್ತಪಡಿಸಿದರು.
ಧರಣಿಯಲ್ಲಿ ನಗರ ಪಾಲಿಕೆ ಸದಸ್ಯ ಚಮನ್ ಸಾಬ್, ಮುಖಂಡರಾದ ಕೆ. ಇಮಾಂ, ಖಾದರ್ ಬಾಷಾ, ಖಜಾಂಚಿ ಖಾದರ್ ಭಾಷ, ಸಂಘಟನಾ ಕಾರ್ಯದರ್ಶಿ ಹೆಚ್.ಎ. ದಾದಾಪೀರ್, ರಾಜ್ಯ ಆಡಳಿತ ಮಂಡಳಿ ಸದಸ್ಯ ಎ.ಆರ್. ಅಯಾಜ್ ಹುಸೇನ್, ನಗರ ಘಟಕದ ಅಧ್ಯಕ್ಷ ಅನ್ವರ್ ಹುಸೇನ್ ಎ.ಆರ್, ಅಯಾಜ್ ಹುಸೇನ್, ಸಂಘದ ವಕ್ತಾರ ಎ.ಫಕೃದ್ಧೀನ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಮ್ತಾಜ್ ಬೇಗಂ, ಕಾರ್ಯದರ್ಶಿ ಹಸೀನಾ ಬೇಗಂ, ಎಂ.ಟಿ. ಟಿಪ್ಪು ಸ್ತುಲಾನ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಸಿಪಿಐ ಮುಖಂಡ ಹೆಚ್.ಕೆ. ರಾಮಚಂದ್ರಪ್ಪ ಮತ್ತಿತರರು ಧರಣಿ ನಿರತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.