ಮಲೇಬೆನ್ನೂರು, ಜ.25- ಇಲ್ಲಿನ ಪುರಸಭೆ, ನಾಡಕಛೇರಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಸೋಮವಾರ ಜಾಗೃತಿ ಜಾಥಾ ನಡೆಸಲಾಯಿತು.
ಇದಕ್ಕೆ ಮುನ್ನ ಪುರಸಭೆ ಆವರಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪುರಸಭೆ ಅಧ್ಯಕ್ಷೆ ನಾಹೀದಾ ಅಂಜುಂ ಸೈಯದ್ ಇಸ್ರಾರ್, ಉಪಾಧ್ಯಕ್ಷೆ ಅಂಜಿನಮ್ಮ ವಿಜಯಕುಮಾರ್, ಉಪತಹಶೀಲ್ದಾರ್ ಆರ್. ರವಿ, ಪುರಸಭೆ ಸದಸ್ಯರಾದ ಬಿ. ಸುರೇಶ್, ಎ. ಆರೀಫ್ಅಲಿ, ಕೆ.ಜಿ. ಲೋಕೇಶ್, ಪರಿಸರ ಇಂಜಿನಿಯರ್ ಉಮೇಶ್, ಆರೋಗ್ಯಾಧಿಕಾರಿ ಗುರುಪ್ರಸಾದ್, ನವೀನ್ ಮತ್ತಿತರರು ಜಾಥಾದಲ್ಲಿ ಭಾಗವಹಿಸಿದ್ದರು.