ಕುಡಿಯುವ ನೀರಿನ ಅವಶ್ಯಕತೆ-ನೈಜ ಪರಿಸರವಾಗಿ ಉಳಿಸಲು ಕುಂದವಾಡ ಕೆರೆ ಅಭಿವೃದ್ಧಿ

ದಾವಣಗೆರೆ, ಜ.25- ಕುಂದವಾಡ ಕೆರೆಯು  ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಪರಿಸರವನ್ನು ಜೀವ ವೈವಿಧ್ಯಗಳ ವಿಕಸನಕ್ಕೆ ಅನುಕೂಲವಾಗುವಂತೆ ನೈಜ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು  ಸಂಸದ ಜಿ.ಎಂ. ಸಿದ್ದೇಶ್ವರ ಅವರು ತಿಳಿಸಿದ್ದಾರೆ.

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಇಂದು ಏರ್ಪಡಿಸಲಾಗಿದ್ದ ಸಿಟಿ ಲೆವೆಲ್ ಅಡ್ವೈಸರಿ ಫೋರಂ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯ ವ್ಯವ ಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು, ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಕೆರೆಯು ನಗರದ ಕುಡಿ ಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿ ದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆ ಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗ್ಯವಲ್ಲದ ರೀತಿ ಪರಿವರ್ತನೆಯಾಗು ತ್ತದೆ. ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯ ಗಳು ಸಾಯುತ್ತವೆ. ಇದನ್ನು ಈ ಹಿಂದೆಯೂ ಗಮನಿಸಲಾಗಿದೆ. ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲು ಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದ್ದು, ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ.

ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್ ದೀಪ ಅಳವಡಿಕೆ, ಹೂವಿನ ಗಿಡಗಳನ್ನು ಹಾಕುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್ ಪಾತ್, ಸೈಕಲ್ ಟ್ರ್ಯಾಕ್ ನಿರ್ಮಾಣ ಮಾಡಲಾಗು ತ್ತಿದೆ.  ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್ ಲಿಂಕ್ ತಂತಿ ಬೇಲಿ ಅಳವಡಿಸಲು ಉದ್ದೇ ಶಿಸಲಾಗಿದೆ. ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ ತುಂಗಭದ್ರಾ ನದಿ ಮತ್ತು ಭದ್ರಾ ಕಾಲುವೆ ಮೂಲಕ ನೀರು ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯ ವಿಷಯವಾಗಿರುವುದರಿಂದ, ಕೆರೆಯಲ್ಲಿ ಸ್ವಚ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದು  ಅಗತ್ಯವಾಗಿದೆ ಎಂದರು. 

 ಚರಂಡಿ, ರಾಜಕಾಲುವೆ ನಿರ್ಮಾಣಕ್ಕೆ ಅಡ್ಡಿ : ನಗರದಲ್ಲಿ ಮಳೆ ಹೆಚ್ಚು ಬಂದಾಗ ನೀರು ಸರಾಗವಾಗಿ ಹರಿಯದೆ, ತಗ್ಗು ಪ್ರದೇಶಗಳಿಗೆ ನುಗ್ಗಿ, ತೊಂದರೆ ಉಂಟಾ ಗುವುದನ್ನು ತಪ್ಪಿಸಲು ರಾಜ ಕಾಲುವೆ ಹಾಗೂ ಚರಂಡಿಗಳ ನಿರ್ಮಾಣವಾಗುತ್ತಿದ್ದು, ಶೇ.50 ರಷ್ಟು  ಕಾಮಗಾರಿ ಪೂರ್ಣಗೊಂಡಿದೆ.  ನಗರದಲ್ಲಿನ ರಾಜ ಕಾಲುವೆ (ಮುಖ್ಯ ಚರಂಡಿ) ಮಾರ್ಗಕ್ಕೆ ಹಲವೆಡೆ ಅನುಮೋದಿತ ಬಡಾವಣೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದಿರುವುದರಿಂದ ತೊಂದರೆ ಉಂಟಾಗಿದೆ. ಅಲ್ಲದೇ ನಗರದ ಹಳೆಯ ಭಾಗದಲ್ಲಿ ಚರಂಡಿ ಹಾಗೂ ರಸ್ತೆಯಲ್ಲಿ ನೀರಿನ ತೊಟ್ಟಿ, ಶೌಚಾಲಯ, ಮೆಟ್ಟಿಲುಗಳು, ಸ್ಟೇರ್‍ಕೇಸ್, ಸ್ಟೋ ರ್‍ರೂಂ ಇತ್ಯಾದಿಗಳನ್ನು ಅನಧಿಕೃತವಾಗಿ ಕಟ್ಟಿಕೊಂಡಿರುವು ದನ್ನು ಗಮನಿಸಲಾಗಿದ್ದು, ಕಾಮಗಾರಿಗಳಿಗೆ  ತೊಂದರೆಯಾಗಿದೆ.  ಮಹಾನಗರ ಪಾಲಿಕೆಯಿಂದ ತೆರವು ಮಾಡಿಕೊಟ್ಟಲ್ಲಿ, ಚರಂಡಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ರವೀಂದ್ರ ಮಲ್ಲಾಪುರ ಹೇಳಿದರು.  

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರತಿಕ್ರಿಯಿಸಿ, ಮಹಾನಗರ ಪಾಲಿಕೆ ಆಯು ಕ್ತರು ಕೂಡಲೇ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಇದರಲ್ಲಿ ಯಾವುದೇ ಪ್ರಭಾವಗಳಿಗೆ ಮಣಿಯದೆ ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.

ಇ-ಟಾಯ್ಲೆಟ್ ಸಮರ್ಪಕ ನಿರ್ವಹಣೆ : ನಗರ ವ್ಯಾಪ್ತಿಯಲ್ಲಿ ಈಗಾಗಲೇ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್‍ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ.  ಆದರೆ, ಹಲವೆಡೆ ಇ-ಟಾಯ್ಲೆಟ್‍ಗಳ ಅಸ ಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸ ದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಸ್ಮಾರ್ಟ್ ಸಿಟಿ ಯೋಜನೆಯ ರವೀಂದ್ರ ಮಲ್ಲಾಪುರ ಉತ್ತರಿಸಿ, ಇ- ಟಾಯ್ಲೆಟ್‍ಗಳನ್ನು ಸಾರ್ವಜನಿಕರ ಅನು ಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್ ಬಾಕ್ಸ್‍ನಲ್ಲಿ ಕಬ್ಬಿಣದ ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲಾ 46 ಇ-ಟಾಯ್ಲೆಟ್‍ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ ಮಹಾ ನಗರ ಪಾಲಿಕೆಗೆ ಹಸ್ತಾಂತರ ಮಾಡಲಾ ಗುವುದು. ರಸ್ತೆ ಸುರಕ್ಷತೆಗಾಗಿ ನಗರದಲ್ಲಿ ಹಾಕಿರುವ ಫ್ಲೆಕ್ಸಿಬಲ್ ಮೀಡಿಯನ್, ಮಾರ್ಕರ್, ಸೋಲಾರ್ ಬ್ಲಿಂಕರ್ಸ್‍ಗಳನ್ನು ದುಷ್ಕರ್ಮಿಗಳು ಕತ್ತರಿಸಿ ಕಳುವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು. 

ಸಭೆಯಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾಪೌರ ಬಿ.ಜಿ.ಅಜಯ್‍ಕುಮಾರ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!