ಮಲೇಬೆನ್ನೂರು ಪುರಸಭೆ ಅಧ್ಯಕ್ಷರ ರಾಜೀನಾಮೆ

ಮಲೇಬೆನ್ನೂರು, ಜ.28- ಇಲ್ಲಿನ ಪುರಸಭೆ ಅಧ್ಯಕ್ಷರಾದ ಶ್ರೀಮತಿ ನಾಹೀದ ಅಂಜುಂ ಸೈಯದ್ ಇಸ್ರಾರ್ ಅವರು ಗುರುವಾರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪವಿಭಾಗಾಧಿಕಾರಿ ಶ್ರೀಮತಿ ಮಮತಾ ಹೊಸಗೌಡರ್ ಅವರನ್ನು ಭೇಟಿ ಮಾಡಿ, ಮುಖ್ಯಾಧಿಕಾರಿ ಧರಣೇಂದ್ರಕುಮಾರ್ ಅವರ ಸಮ್ಮುಖದಲ್ಲಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ಹೇಳಲಾಗಿದೆ.

ಪುರಸಭೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ಆ ಪ್ರಕಾರ ಮೊದಲಿಗೆ ಜೆಡಿಎಸ್‌ಗೆ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಮಾತುಕತೆಯಂತೆ ಅವಧಿ ಮುಗಿದ ಕಾರಣ ಅಧ್ಯಕ್ಷೆ ನಾಹೀದ ಅಂಜುಂ ಅವರು ರಾಜೀನಾಮೆ ನೀಡಿದ್ದಾರೆ. ಮುಂದೆ ಬಿಜೆಪಿ ಪಕ್ಷದವರು ಅಧ್ಯಕ್ಷರಾಗುವ ಸಾಧ್ಯತೆ ಇದೆ. ಉಪಾಧ್ಯಕ್ಷರಾಗಿ ಅಂಜಿನಮ್ಮ ವಿಜಯಕುಮಾರ್ ಮುಂದುವರೆಯಲಿದ್ದಾರೆ.

error: Content is protected !!