ಪುಷ್ಪಾ ಶಾಮನೂರು ಮಹಾಲಿಂಗಪ್ಪ ಕಾಲೇಜಿನಲ್ಲಿ ಕೋವಿಡ್ ತಪಾಸಣಾ ಶಿಬಿರ

ದಾವಣಗೆರೆ, ಏ. 4- ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶ್ರೀಮತಿ ಪುಷ್ಪಾ ಶಾಮನೂರು ಮಹಾಲಿಂಗಪ್ಪ ಶಾಲೆ ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರ ಕೋವಿಡ್ ತಪಾಸಣಾ ಶಿಬಿರವನ್ನು ಮೂರು ದಿನಗಳ ಕಾಲ ನಡೆಸಲಾಯಿತು. 

ಕ್ಷೇತ್ರ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ನಾಯ್ಕ್, ಶಿಕ್ಷಣ ಸಂಯೋಜಕ ಹಾಗೂ ನೋಡಲ್ ಅಧಿಕಾರಿ ಶ್ರೀನಿವಾಸ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ಗಾಯತ್ರಿ, ಉಮಾಪತಿ, ಪ್ರಾಂಶುಪಾಲರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ ಮತ್ತು ಸಿಲ್ಜಿ ಜೋಸ್ ಹಾಗೂ ಆರೋಗ್ಯ ಸಿಬ್ಬಂದಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!