ದಾವಣಗೆರೆ,ಫೆ.2- ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಜಗದ್ಗುರುಗಳಾದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಶ್ರೀ ವಚನಾನಂದ ಸ್ವಾಮೀಜಿ ನಡೆಸುತ್ತಿರುವ ಪಾದಯಾತ್ರೆಯು ನಿನ್ನೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಬರ ಮಾಡಿಕೊಳ್ಳಲಾಯಿತು. ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ್ ಮತ್ತಿತರರು ಉಭಯ ಶ್ರೀಗಳಿಗೆ ಪುಷ್ಪ ಮಾಲೆ ಹಾಕುವುದರ ಮೂಲಕ ಜಗದ್ಗುರುಗಳನ್ನು ಸ್ವಾಗತಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್. ಬಸವಂತಪ್ಪ, ಎಪಿಎಂಸಿ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ಚಿಕ್ಕಜಾಜೂರಿನ ಪಿ.ಎಸ್. ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
December 26, 2024