ದಾವಣಗೆರೆ ವಿಜಯಲಕ್ಷ್ಮಿ ರಸ್ತೆ ವಾಸಿ ವರ್ತಕರಾದ ತುಳಸಿರಾಮ್ ಜಾಂಗೀಡ್ ಅವರ ಧರ್ಮಪತ್ನಿ ಶ್ರೀಮತಿ ಲೀಲಾದೇವಿ ಅವರು ದಿನಾಂಕ 5.4.2021ರ ಸೋಮವಾರ ರಾತ್ರಿ 10.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 62 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6.4.2021ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಜೈನ್ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024