ದಾವಣಗೆರೆ, ಜು.1- ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಮಾಯಕೊಂಡ ಕ್ಷೇತ್ರದ ಹೆದ್ನೆ ತಾಂಡಾದಲ್ಲಿ ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಾಂಡಾದ ಜನರೆಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಉಪಾಧ್ಯಕ್ಷ ಡಾ. ತುಳಸಿನಾಯ್ಕ, ಜಿ.ಪಂ ಸದಸ್ಯ ಬಸವಂತಪ್ಪ ಜಾಗೃತಿ ಮೂಡಿಸಿದರು. ಅಧ್ಯಕ್ಷತೆಯನ್ನು ಮಾಯಕೊಂಡ ಬ್ಲಾಕ್ ಅಧ್ಯಕ್ಷ ಬಿ.ಟಿ. ಹನುಮಂತಪ್ಪ ವಹಿಸಿದ್ದರು.
ಪರಿಶಿಷ್ಟ ಜಾತಿ ರಾಜ್ಯ ಉಪಾಧ್ಯಕ್ಷ ನಾಗರಾಜ ನಾಯ್ಕ, ಕೊಡಗ ನೂರು ಗ್ರಾ.ಪಂ. ಅಧ್ಯಕ್ಷ ಸಿದ್ದಪ್ಪ, ಮಾಯಕೊಂಡ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಹೆದ್ನೆ ಬ್ಲಾಕ್ ಅಧ್ಯಕ್ಷ ಅಂಜನಪ್ಪ, ಪರಶುರಾಮಪ್ಪ, ಜಯರಾಮನಾಯ್ಕ್, ಪರಮೇಶ್ವರನಾಯ್ಕ, ಕಂದಗಲ್ಲು ಮತ್ತಿತರರು ಉಪಸ್ಥಿತರಿದ್ದರು.