ದಾವಣಗೆರೆ ವಿವಿ ಆಡಳಿತ ವಿಭಾಗದ ಕುಲಸಚಿವರಾಗಿ ಗಾಯತ್ರಿ ದೇವರಾಜ್

ದಾವಣಗೆರೆ ವಿವಿ ಆಡಳಿತ ವಿಭಾಗದ ಕುಲಸಚಿವರಾಗಿ ಗಾಯತ್ರಿ ದೇವರಾಜ್ - Janathavaniದಾವಣಗೆರೆ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಕುಲಸಚಿವರನ್ನಾಗಿ ಪ್ರೊ. ಡಾ. ಗಾಯತ್ರಿ ದೇವರಾಜ್ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಇದೇ ವಿಶ್ವವಿದ್ಯಾನಿಲಯದಲ್ಲಿ ಸೂಕ್ಷ್ಮ ಜೀವಾಣು ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ, ವಿಜ್ಞಾನ ನಿಕಾಯದ ಡೀನ್‍ ಆಗಿ, ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ, ಐಕ್ಯೂಏಸಿ ನಿರ್ದೇಶಕರಾಗಿ ಗಾಯತ್ರಿ  ಅವರು ಕಾರ್ಯ ನಿರ್ವಹಿಸಿದ್ದಾರೆ.

ಇದೀಗ ಆಡಳಿತ ವಿಭಾಗದ ಕುಲಸಚಿವರಾಗಿ ಗಾಯತ್ರಿ ದೇವರಾಜ್ ಅವರು ನಿನ್ನೆ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ದಾವಣಗೆರೆ ವಿವಿ ಕುಲಪತಿ ಪ್ರೊ. ಎಸ್. ವಿ. ಹಲಸೆ ಹಾಗೂ ಹಣಕಾಸು ಅಧಿಕಾರಿ ಶ್ರೀಮತಿ ಪ್ರಿಯಾಂಕಾ ಅವರುಗಳು ಸ್ವಾಗತಿಸಿ ಶುಭ ಹಾರೈಸಿದರು.

ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗಾಗಿ ಕರ್ನಾಟಕ ರಾಜ್ಯ ಸರ್ಕಾರವು ಕೊಡಮಾಡುವ ವಿಜ್ಞಾನ ಕ್ಷೇತ್ರದ ಉನ್ನತ ಪ್ರಶಸ್ತಿ `ಡಾ. ಕಲ್ಪನಾ ಚಾವ್ಲಾ ಯುವ ಮಹಿಳಾ ವಿಜ್ಞಾನಿ’ ಪ್ರಶಸ್ತಿಯನ್ನು ಗಾಯತ್ರಿ ಅವರು ಪಡೆದಿದ್ದು, ಸಂಶೋಧನೆ ಮತ್ತು ಆಡಳಿತಾತ್ಮಕವಾಗಿ ಗುರುತಿಸಿಕೊಂಡಿದ್ದಾರೆ.

ಗಾಯತ್ರಿ, ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರೂ ಆಗಿರುವ ಹಿರಿಯ ವಿಜ್ಞಾನಿ ಡಾ.ಟಿ.ಎನ್. ದೇವರಾಜ್ ಅವರ ಧರ್ಮಪತ್ನಿ.

error: Content is protected !!