ದಾವಣಗೆರೆ, ಜು.4- ರಾಜ್ಯ ಸರ್ಕಾರವು ಅನ್ಲಾಕ್ 3.0 ನಿಯಮಾವಳಿ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ವಾಣಿಜ್ಯ ಚಟುವಟಿಕೆಗಳಿಗೆ ಪೂರ್ಣ ಅವಕಾಶ ನೀಡಲಾಗಿದೆ.
ಈ ಬಗ್ಗೆ ಭಾನುವಾರ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರವು ಸಡಿಲಿಸಿರುವ ನಿರ್ಬಂಧಗಳು ಜುಲೈ 5 ರಿಂದ 19ರವರೆಗೆ ದಾವಣಗೆರೆ ಜಿಲ್ಲೆಗೂ ಅನ್ವಯವಾಗಲಿವೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಬಾರ್, ಮಾಲ್ ಹಾಗೂ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಸರ್ಕಾರಿ-ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವ ಟಿಕೆಗಳು ಶೇ. 100 ರಷ್ಟು ಸಿಬ್ಬಂದಿ ಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಕೊರೊನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ.