ಕೂಡ್ಲಿಗಿ, ಏ.14- ಬೆಳಗಾವಿ ಲೋಕಸಭಾ ಉಪ ಚುನಾವಣೆ ನಿಮಿತ್ತ ತೆರಳಿದ್ದ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸದಸ್ಯ ಲೋಕೇಶ್ ವಿ. ನಾಯಕ್ ಅವರು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ನಂಜನಗೂಡು ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ್ ಸೇರಿದಂತೆ, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
December 26, 2024