ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ದಾವಣಗೆರೆ, ಫೆ.11- ಕಳೆದ ಒಂದು ವರ್ಷದಿಂದ ನಿಲ್ಲಿಸಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡು ಗಡೆ ಮಾಡುವಂತೆ ಬಿಎಸ್‌ಪಿ ರಾಜ್ಯ ಸಂಯೋಜಕರೂ, ಕರ್ನಾಟಕ ಉಸ್ತುವಾರಿಯೂ ಆದ ಮಾದಸಂದ್ರ ಮುನಿ ಯಪ್ಪ ಅವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ಗಳು ವಿದ್ಯಾರ್ಥಿ ವೇತನವಿಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ನ್ಯಾ. ನಾಗಮೋಹನ್‌ ದಾಸ್ ವರದಿಯನ್ನು ತಿಂಗಳೊಳಗೆ ಜಾರಿಗೆ ತರಬೇಕು. ರಾಜ್ಯದಲ್ಲಿ ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಮತ್ತು ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿದರು. ಈಗಿರುವ ಪರಿಶಿಷ್ಟ ಜಾತಿಗೆ ಶೇ. 15 ರಿಂದ 17ಕ್ಕೆ ಪ. ವರ್ಗಗಳನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಳ ಮಾಡಬೇಕು. ರೈತರಿಗೆ ಮಾರಕವಾಗಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು. ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಪ್ರಮಾಣ ಪತ್ರ ಪಡೆಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಶೋಕ ಚಕ್ರವರ್ತಿ, ಡಿ. ಹನುಮಂತಪ್ಪ, ವೆಂಕಟೇಶಬಾಬು, ಮಹಮದ್‌ ಕಲೀಂ, ಧನರಾಜು ಉಪಸ್ಥಿತರಿದ್ದರು.

error: Content is protected !!