ಪಕ್ಷದ ಸಿದ್ಧಾಂತ ಒಪ್ಪಿಕೊಂಡವರು ಫಲಾಪೇಕ್ಷೆಯಿಲ್ಲದೇ ಕೆಲಸ ಮಾಡಬೇಕು

ಹರಪನಹಳ್ಳಿ ಕಾಂಗ್ರೆಸ್ ಸಭೆಯಲ್ಲಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಕರೆ

ಹರಪನಹಳ್ಳಿ, ಜು.5- ಪಕ್ಷದ ಸಿದ್ಧಾಂತ ಒಪ್ಪಿಕೊಂಡಿರುವವರು ಯಾವುದೇ ಫಲಾಪೇಕ್ಷೆಯಿಲ್ಲದೇ  ಕೆಲಸ ಮಾಡುವುದನ್ನು ಮೈಗೂಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಕರೆ ನೀಡಿದ್ದಾರೆ.

ಪಟ್ಟಣದ ಸಮತಾ ರೆಸ್ಟೋರೆಂಟ್‍ನ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂದು ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದ ಸಾಮಾಜಿಕ ಜಾಲತಾಣದ ಸಂಚಾಲಕರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಕ್ರಿಯಾಶೀಲರಾಗಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಾಗುತ್ತದೆ. ವಿವಿಧ ಘಟಕಗಳ ಪದಾಧಿಕಾರಿಗಳು ಪ್ರತಿಯೊಬ್ಬರು ತಮ್ಮ ಹೊಣೆಗಾರಿಕೆಯನ್ನು ಪ್ರಾಮಾಣಿಕತೆಯಿಂದ ನಿರ್ವಹಣೆ ಮಾಡಿದರೆ ಖಂಡಿತಾ ಪಕ್ಷ ಬಲವರ್ಧನೆ ಗೊಳ್ಳುತ್ತದೆ ಎಂದು ಹೇಳಿದರು. 

ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ, ಮುದುಗಲ್ ರಾಮಕೃಷ್ಣ, ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ಮಾತನಾಡಿ, ಕಾರ್ಯಕರ್ತರನ್ನು ಹುರಿದುಂಬಿಸಿದರು. 

ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳುವ ರೀತಿಯನ್ನು ತರಬೇತು ದಾರ ಪ್ರವೀಣ್ ದೇಶಪಾಂಡೆ ತರಬೇತಿ ನೀಡಿದರು.  ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತೂರು ಬಸವರಾಜ್, ರವಿ ಪಡೆ ಅಧ್ಯಕ್ಷ ಉದಯಶಂಕರ್ ಮಾಗಾ ನಹಳ್ಳಿ, ಬಾಗಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಪೂಜಾರ್ ಹನುಮಂತ, ಕಡಬ ಗೆರೆ ಅಧ್ಯಕ್ಷೆ ಅನುಷಾ, ರಾಯದುರ್ಗದ ಮಂಜುನಾಥ್, ಉಮಾಶಂಕರ್, ಕವಿತಾ ಸುರೇಶ್‌, ರಿಯಾಜ್ ಅಹ್ಮದ್, ತಾಲ್ಲೂಕು ಸಂಚಾಲಕ ಮಂಜಾನಾಯ್ಕ್ ಇನ್ನಿತರರಿದ್ದರು.

error: Content is protected !!