ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು

ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು - Janathavaniಹರಿಹರ ತಹಶೀಲ್ದಾರ್‍ ಕೆ. ಬಿ.ರಾಮಚಂದ್ರಪ್ಪ

ಹರಿಹರ, ಏ.18- ತಾಲ್ಲೂಕಿನಲ್ಲಿ ಕೊರೊನಾ ರೋಗದ ಲಕ್ಷಣಗಳು ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಮರುಕಳಿಸುತ್ತಿರುವುದರಿಂದ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಹಶೀಲ್ದಾರ್‍ ಕೆ. ಬಿ.ರಾಮಚಂದ್ರಪ್ಪ ತಿಳಿಸಿದರು.

ನಗರದ ತಹಶೀಲ್ದಾರ್‍ ಕಚೇರಿಯ ಸಭಾಂಗಣದಲ್ಲಿ ಕೊರೊನಾ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ವಿಚಾರಕ್ಕೆ ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ತಾಪಂ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮಹತ್ವದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನಗರದಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ರೋಗದ ಲಕ್ಷಣಗಳು ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಸಾರ್ವಜ ನಿಕರು ಸರ್ಕಾರದ ನಿಯಮಗಳನ್ನು ಪಾಲನೆ ಮಾಡಿದರೆ ಮಾತ್ರ ಕೊರೊನಾ ರೋಗವನ್ನು ತಡೆಗಟ್ಟಲು ಸಾಧ್ಯವಾ ಗುತ್ತದೆ. ಇಲ್ಲದೆ ಹೋದರೆ ರೋಗವು ಅಧಿಕವಾಗಿ ಉಲ್ಬ ಣಗೊಳ್ಳುತ್ತದೆ. ಇದರಿಂದಾಗಿ ಅದನ್ನು ತಡೆಗಟ್ಟಲು ದೊಡ್ಡ ಸಮಸ್ಯೆ ಆಗುತ್ತದೆ. ಆದ್ದ ರಿಂದ ಸಾರ್ವಜನಿಕರು ಅರಿತು ಕೊಂಡು ಸರ್ಕಾರದ ಮಾರ್ಗಸೂ ಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸ ಬೇಕು ಎಂದು ಹೇಳಿದರು.

ಸಾರ್ವಜನಿಕರು ಅತಿ ಹೆಚ್ಚು ಜನಸಂದಣಿ ಇರುವ ಸಭೆ, ಸಮಾರಂಭದ ಸ್ಥಳಕ್ಕೆ ಹೋಗುವುದನ್ನು ನಿಲ್ಲಿಸಬೇಕು. ಮಾಸ್ಕ್ ಮತ್ತು ಸಾನಿಟೈಸರ್ ಬಳಕೆ ಮಾಡಬೇಕು. ಅತಿಯಾಗಿ ಜನರು ಇರವ ಸ್ಥಳದಲ್ಲಿ ಅಂತರವನ್ನು ಕಾಯ್ದುಕೊಂಡು ಹೋಗಬೇಕು, ಸ್ವಚ್ಚತೆಯಿಂದ ಇರಬೇಕು. ನಲವತ್ತೈದು ವರ್ಷಗಳ ಮೇಲಿನ ವ್ಯಕ್ತಿಗಳು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಕೆಲಸ ಇಲ್ಲದೆ ಇದ್ದರೂ ಸಹ ಅನಗತ್ಯವಾಗಿ ಓಡಾವುದನ್ನು ಕೈ ಬಿಡಬೇಕು. ವಾಹನಗಳಲ್ಲಿ ಓಡಾಡುವ ಸಮಯದಲ್ಲಿ ಹೆಚ್ಚಾಗಿ ಜನರನ್ನು ಕುಳ್ಳಿರಿಸಿಕೊಂಡು ಓಡಾಡಬಾರದು. ಕುಡಿಯಲು ಶುದ್ಧವಾದ ನೀರನ್ನು ಬಳಕೆ ಮಾಡಬೇಕು. ಹೀಗೆ ಮಾಡುವುದರಿಂದ ಕೊರೋನಾ ರೋಗವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ತಾಲ್ಲೂಕಿನಲ್ಲೂ ಸಹ ದಿನದಿಂದ ದಿನಕ್ಕೆ ಅಧಿಕ ಪ್ರಮಾಣದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚು ತ್ತಿದ್ದು, ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡವು ಅವರಿಗೆ ಮೂರು ಹಂತಗಳಲ್ಲಿ ಚಿಕಿತ್ಸೆ ನೀಡುತ್ತಿದ್ದು, ರೋಗದ ಪ್ರಮಾಣ ಮನುಷ್ಯನಲ್ಲಿ ಹೆಚ್ಚಾಗಿ ಇದ್ದರೆ ಅವರನ್ನು ದಾವಣಗೆರೆ ನಗರಕ್ಕೆ ಹೆಚ್ಚಿನ ಚಿಕಿತ್ಸೆಗೆ ಕಳಿಸಿಕೊಡುತ್ತಾರೆ. ಇಲ್ಲಿಯವರೆಗೆ ಕೊರೊನಾ ರೋಗಿಗಳನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸುವುದಕ್ಕೆ ವ್ಯವಸ್ಥೆ ಏನು ಮಾಡಿರುವುದಿಲ್ಲ. 

ಕೊರೊನಾ ರೋಗವು ಕಂಡು ಬಂದ ವ್ಯಕ್ತಿಗಳ ತಪಾಸಣೆ ಮಾಡಿ ಅವರನ್ನು ಹೋಮ್ ಐಸೋಲೇಷನ್‍ನಲ್ಲಿ ಇರುವಂತೆ ಸೂಚಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಯಾವುದೇ ತರಹದ ಮನೆಗಳ ಮುಂದೆ ಸೀಲ್ ಡೌನ್ ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ರೋಗವು ಹೆಚ್ಚಾಗಿ ಹರಡದಂತೆ ತಡೆಗಟ್ಟಲು ಆಶಾ ಕಾರ್ಯಕರ್ತೆಯರು ಮತ್ತು ಪಿಡಿಓ ಗಳಿಗೆ ಹೆಚ್ಚು ಜವಾಬ್ದಾರಿ ವಹಿಸಲಾಗಿದೆ. ಅವರು ಸಹ ಉತ್ತಮ ಸೇವೆಯನ್ನು ಪೂರೈಸಲು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಬರುವ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಮಾತ್ರ ಮಾಡಿ ನಂತರದಲ್ಲಿ ಬಂದ್ ಮಾಡುವಂತೆ ಸೂಚಿಸ ಲಾಗಿದೆ. ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಔಷಧಿ, ಗುಳಿಗೆಗಳು ಹೆಚ್ಚು ಶೇಖರಣೆ ಮಾಡಿಕೊಳ್ಳಲು ಸರ್ಕಾರಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ನಗರದ ಕಸದ ವಾಹನಗಳಲ್ಲಿ ಕಡ್ಡಾಯವಾಗಿ ಮೈಕ್ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಮಾರ್ಗಸೂಚಿಗಳನ್ನು ತಿಳಿಸುವುದಕ್ಕೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಲಾಗಿದೆ. ಪೊಲೀಸ್ ಇಲಾಖೆಯವರಿಗೆ ರಾತ್ರಿಯಲ್ಲಿ ಅಂಗಡಿ ಮುಂಗಟ್ಟು ಗಳನ್ನು ಬೇಗ ಮುಚ್ಚಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ, ತಾಪಂ ಇಓ, ಸಮಾಜ ಕಲ್ಯಾಣ ಇಲಾಖೆ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. 

error: Content is protected !!