ದೇವರಬೆಳಕೆರೆಯಲ್ಲಿ ಕುಷ್ಠರೋಗ ಅರಿವು ಆಂದೋಲನ

ಮಲೇಬೆನ್ನೂರು, ಫೆ.15- ದೇವರಬೆಳಕೆರೆ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಶ ಕುಷ್ಠರೋಗ ಕುರಿತು ಅರಿವು ಆಂದೋಲನಾ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಹಿರಿಯ ಆರೋಗ್ಯ ಸಹಾಯಕ ಎಂ. ಉಮ್ಮಣ್ಣ, ಕುಷ್ಠರೋಗ ಅನುವಂಶೀಯವೂ ಅಲ್ಲ, ಶಾಶ್ವತವೂ ಅಲ್ಲ. ಅದೊಂದು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಸೂಕ್ಷ್ಮಾಣುವಿನಿಂದ ಬರುತ್ತದೆ. ಶೀಘ್ರ ಪತ್ತೆ, ತ್ವರಿತ ಚಿಕಿತ್ಸೆಯಿಂದ ಅಂಗವಿಕಲತೆಯನ್ನು ತಪ್ಪಿಸಬಹುದೆಂದು ವಿವರಿಸಿದರು.

ಗ್ರಾ.ಪಂ. ಅಧ್ಯಕ್ಷೆ ಗೀತಮ್ಮ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿ ಡಾ. ದರ್ಶನ, ಶಾಲಾ ಮುಖ್ಯ ಶಿಕ್ಷಕ ಬಸವನಗೌಡ, ಕಿರಿಯ ಆರೋಗ್ಯ ಸಹಾಯಕರಾದ ಬಿ. ಆದರ್ಶ, ಪರಶುರಾಮಪ್ಪ, ರೇಖಾ ಮತ್ತು ಶಾಲೆಯ ಶಿಕ್ಷಕರು ಸಭೆಯಲ್ಲಿ ಭಾಗವಹಿಸಿದ್ದರು. 

error: Content is protected !!