ರಾಣೇಬೆನ್ನೂರು : ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

ರಾಣೇಬೆನ್ನೂರು, ಫೆ.16- ದೇವ ಮಾನವರಿಗೆ ಬಟ್ಟೆ ನೇಯ್ದು ಕೊಟ್ಟ ದೇವಾಂಗ ಜನರ ಬದುಕು ದುಸ್ತರವಾಗಿದ್ದು, ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಿ, ಸಮಾಜದ ಅಭಿವೃದ್ಧಿಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ತಾಲ್ಲೂಕಿನ ತುಮ್ಮಿನಕಟ್ಟೆ ದೇವಾಂಗ ಸಮಾಜದವರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

2ಎ ಮೀಸಲಾತಿಯಿಂದ ಯಾವ ಪ್ರಯೋಜನವೂ ಆಗುತ್ತಿಲ್ಲ. ಕಾರಣ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಅವರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬೆಳೆಯಲು ಅವಕಾಶ ಕಲ್ಪಿಸುವಂತೆ ಕೋರಿ ನಗರದ ಕೆಇಬಿ ಗಣೇಶ ಗುಡಿಯಿಂದ ತಹಶೀ ಲ್ದಾರರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಮೇಶ ಗಂಜಾಮದ, ಸತ್ಯನಾರಾಯಣ ದುರಗೆರೆ, ಗೌರಮ್ಮ ಗಂಜಾಮದ, ಸತ್ಯಪ್ಪ ಮತ್ತಿತರರು ಹಾಜರಿದ್ದರು.

ರಾಣೇಬೆನ್ನೂರು ದೇವಾಂಗ ಸಮಾಜದ ಸಭೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎನ್ನುವ ನಿರ್ಣಯವನ್ನು ಸಭೆ ಕೈಗೊಂಡಿದೆ ಎಂದು ತಿಳಿದುಬಂದಿದೆ.

error: Content is protected !!