ದಾವಣಗೆರೆ, ಜು.11- ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ಹೇರಬೇಡಿ. ಒಂದೇ ಪರೀಕ್ಷೆ ನಡೆಸಿ, ಎರಡು ಡೋಸ್ ಉಚಿತ ವ್ಯಾಕ್ಸಿನೇಷನ್ ಇಲ್ಲದಿದ್ದರೆ ಪರೀಕ್ಷೆಯೂ ಬೇಡ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ ಜಿಲ್ಲಾ ಸಮಿತಿ ಮನವಿ ಮಾಡಿದೆ.
ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಸಮಸ್ಯೆಗಳ ಕುರಿತು ಆಲಿಸಿದರು. ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ವಿದ್ಯಾರ್ಥಿಗಳು ಸರ್ಕಾರದಿಂದ ಅಧಿಕೃತ ತೀರ್ಮಾನ ಬರುವವರೆಗೂ ಹೋರಾಟವನ್ನು ಕೈಬಿಡದೇ ನಮ್ಮ ಎಚ್ಚರದಲ್ಲಿ ನಾವು ಇರಬೇಕು ಎಂದು ಎಐಡಿಎಸ್‌ಒ ಕರೆ ನೀಡುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.