ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಖಾಸಗಿ ಸಹಭಾಗಿತ್ವ ಬೇಡ

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಖಾಸಗಿ ಸಹಭಾಗಿತ್ವ ಬೇಡ - Janathavaniದಾವಣಗೆರೆ,ಜು.12- ದಾವಣಗೆರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ವಹಣೆಗೆ ಖಾಸಗಿ ಸಹಭಾಗಿತ್ವ ಬೇಡ, ನೇರವಾಗಿ ಸರ್ಕಾರವೇ ಜವಾಬ್ದಾರಿ ನಿಭಾಯಿಸುವಂತಾಗಬೇಕೆಂದು ಜೆಡಿಎಸ್ ಮುಖಂಡ ಕೆ.ಬಿ. ಕಲ್ಲೇರುದ್ರೇಶ್  ಅವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಬಗ್ಗೆ ಬರುವ ಬಜೆಟ್ ನಲ್ಲಿ ಪ್ರಸ್ತಾಪಿಸಿ, ಅನುಮೋದನೆ ಪಡೆಯಬೇಕಾಗಿದೆ. ಸಂಸದರು, ಶಾಸಕರು ಸೇರಿದಂತೆ ಎಲ್ಲಾ ಜನ ಪ್ರತಿನಿಧಿಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುವ ಅಗತ್ಯವಿದೆ ಎಂದರು.

ನಗರಕ್ಕೆ ಕಾರ್ಮಿಕ ಇಲಾಖೆಯ ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಿದರೆ ಕಾರ್ಮಿಕರು, ಬಡಜನರಿಗೆ ಹೆಚ್ಚು ಪ್ರಯೋಜನವಾಗಲಿದೆ. ಈ ಬಗ್ಗೆ ಸಂಸದರು ಕಾಳಜಿ ವಹಿಸಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮನವಿ ಮಾಡಿದರು.

ಎಲ್ಲಾ ಅರ್ಹತೆಗಳನ್ನು ಹೆೋಂದಿರುವ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜು ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆಯ ವೈದ್ಯಕೀಯ ಕಾಲೇಜು ಮಂಜೂರು ಮಾಡಿದರೆ ಜಿಲ್ಲೆಯ ಜನರಿಗೆ  ಅನುಕೂಲವಾಗಲಿದೆ ಎಂದು ಹೇಳಿದರು. ಧನ್ಯಕುಮಾರ್ ಬದ್ನೇನಹಳ್ಳಿ, ಅಜ್ಜಯ್ಯ ಮೆದಕೇರನಹಳ್ಳಿ ಉಪಸ್ಥಿತರಿದ್ದರು.

error: Content is protected !!