ದಾವಣಗೆರೆ, ಜು.13- ಜಿಲ್ಲೆ ಯಲ್ಲಿ ಮಂಗಳವಾರ 36 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 109 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 18, ಹರಿಹರ 4, ಜಗಳೂರು 1, ಚನ್ನಗಿರಿ 12, ಹೊನ್ನಾಳಿ ತಾಲ್ಲೂಕಿನಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ 420 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 583 ಜನರು ಮೃತಪಟ್ಟಿದ್ದಾರೆ.