ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಶೈಕ್ಷಣಿಕ ಅಭಿವೃದ್ಧಿ

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಶೈಕ್ಷಣಿಕ ಅಭಿವೃದ್ಧಿ - Janathavaniಹರಿಹರ, ಜು.13- ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಹರಿಹರ ನಗರದಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದರೆ ಈ ಭಾಗದ ಜನರು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೆೋಂದಲು ಸಾಧ್ಯವಿದೆ ಎಂದು ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರರೂ, ವಕೀಲರೂ ಆದ ಎಂ. ನಾಗೇಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ನಗರದ ಗಾಂಧಿ ವೃತ್ತದಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಸರ್ಕಾರಿ ವೈದ್ಯಕೀಯ ಕಾಲೇಜನ್ನು ನಗರದಲ್ಲೇ ಸ್ಥಾಪಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ನಿನ್ನೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯಿಕವಾಗಿ ತನ್ನದೇ ಆದ ಛಾಪು ಮೂಡಿಸಿ, ಅಭಿವೃದ್ಧಿ ಪಥದತ್ತ ಸಾಗುತ್ತಿರುವ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ನಗರದ ಆರ್ಥಿಕತೆಗೆ ಉತ್ತೇಜನ ನೀಡುವ ಜೆೋತೆಗೆ ಹರಿಹರ-ದಾವಣಗೆರೆ ಅವಳಿ ನಗರಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಕಾರ್ಮಿಕ ಮುಖಂಡ ಹೆಚ್.ಕೆ. ಕೆೋಟ್ರಪ್ಪ ಮಾತನಾಡಿ, ನಗರದಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತಂತೆ ಈಗಾಗಲೇ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಬಲ ನೀಡಲಾಗಿದೆ. ಹಾಲಿ, ಮಾಜಿ ಶಾಸಕರು ವಿವಿಧ
ಸಮಾಜಗಳ ಮಠಾಧೀಶರು, ವಿವಿಧ ಸಂಘ-ಸಂಸ್ಥೆಗಳ ಸಹಮತ ಕೂಡ ಇದೆ ಎಂದು ಹೇಳಿದರು.

error: Content is protected !!