ದಾವಣಗೆರೆ, ಜು.12- ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ, ಹಿರಿಯ ನಟ ಶಿವರಾಜ್ ಕುಮಾರ್ ಅವರ 59ನೇ ಜನ್ಮ ದಿನವನ್ನು ನಗರದ ಅಭಿಮಾನಿಗಳು ಸಂಭ್ರಮಿಸಿದರು.
ನಿಟುವಳ್ಳಿಯಲ್ಲಿ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶಿವರಾಜ್ ಕುಮಾರ್ ಅವರ ಭಾವಚಿ ತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಾಚರಣೆ ಜೊತೆಗೆ ಕೇಕ್ ಕತ್ತರಿಸಿ ಸಿಹಿ ಹಂಚಿ ಶುಭಾಶ ಯದೊಂದಿಗೆ ಅಭಿಮಾನ ಮೆರೆದರು.
ಮಹಿಳೆಯರು ಹಾಗೂ ಮಕ್ಕಳೂ ಸಹ ಶಿವಣ್ಣನ ಜನ್ಮ ದಿನವನ್ನಾಚರಿಸಿ ತಮ್ಮ ಅಭಿಮಾನವನ್ನು ಅಭಿವ್ಯಕ್ತಪಡಿಸಿದರು.
ನಿಟುವಳ್ಳಿ ಏರಿಯಾದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಿವಣ್ಣನಿಗೆ ಆರೋಗ್ಯ ಮತ್ತು ಆಯಸ್ಸು ಹೆಚ್ಚಾಗಲೆಂದು ಪ್ರಾರ್ಥಿಸಿ, ನಿಟ್ಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.