ದಾವಣಗೆರೆ, ಜು. 13 – ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಪಿ.ಬಿ. ರಸ್ತೆಯ ಬಿಎಸ್ಸೆನ್ನೆಲ್ ಕಚೇರಿ ಎದುರು ನಿರ್ಮಾಣವಾಗಿರುವ ಮೇಲ್ಸೇತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ನಾಮಕರಣಗೊಳಿಸಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಇಂದು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಎಂದು ಮಹಾನಗರ ಪಾಲಿಕೆ ವತಿಯಿಂದ ನಾಮಕರಣ ಮಾಡಲಾಗಿದೆ. ಇದಕ್ಕೆ ಬಹಳ ಹೆಮ್ಮೆಯಾಗುತ್ತಿದೆ. ಅಂತಹ ಮಹಾಪುರುಷರ ಹೆಸರನ್ನು ಈ ಜಾಗಕ್ಕೆ ನಾಮಕರಣ ಮಾಡಿರುವುದು ಉತ್ತಮ ಸೇವೆ ಎಂದು ಶ್ಲ್ಯಾಘಿಸಿದರು.
ನಂತರದಲ್ಲಿ ಸಚಿವರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ಪಿ ಸಿ.ಬಿ. ರಿಶ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ದೂಡಾ ಸದಸ್ಯರಾದ ಡಿ.ವಿ. ಜಯರುದ್ರಪ್ಪ, ಆರ್.ಎಲ್. ದೇವೀರಮ್ಮ, ಸೌಭಾಗ್ಯ ಮುಕುಂದ, ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರುಗಳಾದ ಪ್ರಸನ್ನ ಕುಮಾರ್, ಸುಧಾ ಇಟ್ಟಿಗುಡಿ ಮಂಜುನಾಥ್, ಆಶಾ ಉಮೇಶ್, ಗೋಣೆಪ್ಪ, ಕೆ.ಚಮನ್ಸಾಬ್, ಉರ್ ಬಾನು (ಪಂಡಿತ್), ಮುಖಂಡರಾದ ಅಯೂಬ್ ಪೈಲ್ವಾನ್ ಮತ್ತಿತರರು ಉಪಸ್ಥಿತರಿದ್ದರು.