ಸಂಸದ ಜಿ.ಎಂ.ಸಿದ್ದೇಶ್ವರ ಶ್ಲ್ಯಾಘನೆ
ದಾವಣಗೆರೆ, ಫೆ.24- ಮಹಾನಗರ ಪಾಲಿಕೆ ಸದಸ್ಯ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ದೇವರಮನೆ ಶಿವಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ, ರಾಜ್ಯ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿ.ಎಂ.ಸಿದ್ದೇಶ್ವರ, ದೇವರಮನಿ ಶಿವಕುಮಾರ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ತಗೆದುಕೊಂಡಿದ್ದಾರೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಇಡೀ ದೇಶವೇ ನರೇಂದ್ರ ಮೋದಿಯವರ ಕಾರ್ಯಕ್ಕೆ ಶ್ಲ್ಯಾಘನೆ ವ್ಯಕ್ತಪಡಿಸು ತ್ತಿದೆ. ಸಹಜವಾಗಿ ಅನೇಕ ಮುಖಂಡರುಗಳು ಬಿಜೆಪಿ ಯತ್ತ ಮುಖಮಾಡುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿರಬೇಕು ಎನ್ನುವ ಆಸೆ ನನಗಿದೆ. ಮುಂಬರುವ ದಿನಗಳಲ್ಲಿ ಈ ನನ್ನ ಆಸೆಗೆ ದೇವರಮನೆ ಶಿವಕುಮಾರ್ರಂತಹ ನಾಯಕರ ಸೇರ್ಪಡೆ ಹೆಚ್ಚು ಶಕ್ತಿಯನ್ನು ತುಂಬಲಿವೆ ಎಂದರು.
ಕಾಂಗ್ರೆಸ್ ಭದ್ರ ಕೋಟೆಯಾಗಿದ್ದ ದಾವಣಗೆರೆಯಲ್ಲಿ ಇಂದು ಕಾಂಗ್ರೆಸ್ ನೆಲಕಚ್ಚುವಂತೆ ಮಾಡುವಲ್ಲಿ ಕಾರ್ಯಕ ರ್ತರ ಶ್ರಮ ಅಪಾರವಿದೆ. ಪಕ್ಷವನ್ನು ನಂಬಿ ಬಂದ ಕಾರ್ಯ ಕರ್ತರನ್ನು ಕಡೆಗಣಿಸುವ ಪ್ರಶ್ನೆ ನಮ್ಮ ಪಕ್ಷದಲ್ಲಿ ಇಲ್ಲ. ಬಂದವರನ್ನು ಗೌರವದಿಂದ ನಡೆಸಿಕೊಳ್ಳುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ಎಳ್ಳಷ್ಟು ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಬಿಜೆಪಿ ದೇಶ ಭಕ್ತರ ಪಕ್ಷವಾಗಿದ್ದು, ಅಭಿವೃದ್ದಿಯನ್ನೇ ಮುಖ್ಯ ದ್ಯೇಯವನ್ನಾಗಿಸಿ ಕೊಂಡಿರುವ ಪಕ್ಷ. ಇಂತಹ ಪಕ್ಷದಲ್ಲಿ ಸದಸ್ಯರಾಗಿ ಕೆಲಸ ಮಾಡುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ವಿ.ರಾಮಚಂದ್ರ, ವಿಧಾನ ಪರಿಷತ್ ಸದಸ್ಯರಾದ ತೇಜಸ್ವಿನಿ ರಮೇಶ್, ಹನುಮಂತ್ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯರ್ಶಿ ಬಿ.ಎಸ್.ಜಗದೀಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ವೇಣುಗೋಪಾಲ್ ರೆಡ್ಡಿ, ಸಹಕಾರಿ ಧುರೀಣ ಎನ್.ಎ.ಮುರುಗೇಶ್, ನೂತನ ಮೇಯರ್ ಎಸ್.ಟಿ.ವೀರೇಶ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಉಪಸ್ಥಿತರಿದ್ದರು.