ಪ.ಪಂ. ಮುಖ್ಯಾಧಿಕಾರಿ ರಾಜು ಡಿ.ಬಣಕಾರ್ ಎಚ್ಚರಿಕೆ
ಜಗಳೂರು, ಏ.25- ಹಂದಿಗಳಿಂದ ಸಾರ್ವ ಜನಿಕರಿಗೆ ತೊಂದರೆಯಾಗದಂತೆ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದು ಪ.ಪಂ. ಮುಖ್ಯಾಧಿಕಾರಿ ರಾಜು ಡಿ. ಬಣಕಾರ್ ಸೂಚನೆ ನೀಡಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಹಂದಿ ಮಾಲೀ ಕರ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಚರಂಡಿ ನೈರ್ಮಲ್ಯ ಕಾಪಾಡಬೇಕು. ಕೋವಿಡ್ ಅಲೆ ಹಾಗೂ ಸಾಂಕ್ರಾಮಿಕ ರೋಗಗಳು ಹರಡ ದಂತೆ ನೋಡಿ ಕೊಳ್ಳಬೇಕು. ಹಂದಿ ಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಯಾಗದಂತೆ ನೋಡಿಕೊಳ್ಳಿ. ಸರ್ಕಾರದ ಆದೇಶ ದಂತೆ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಂರಕ್ಷಣೆ ಮಾಡಿಕೊಳ್ಳಬೇಕು. ನಿಯಮ ಉಲ್ಲಂಘಿಸಿ ದರೆ ಹಂದಿ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ.ಪಂ. ಅಧ್ಯಕ್ಷ ಆರ್. ತಿಪ್ಪೇಸ್ವಾಮಿ, ಸದಸ್ಯರಾದ ಪಾಪಲಿಂಗಪ್ಪ, ಆರೋಗ್ಯ ನಿರೀಕ್ಷಕ ಖಿಫಾಯತ್, ಕಂದಾಯ ನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.