ಗುರ್ಗಾಂವ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ. ಶಾಂತನಗೌಡರ್ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರ ಕಳೇಬರವನ್ನು ಬೆಂಗಳೂರಿನಲ್ಲಿರುವ ರಾಜಾಜಿ ನಗರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುವುದು. ಬೆಂಗಳೂರಿನಲ್ಲೇ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.