ಹೊನ್ನಾಳಿ, ಜು.18- ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸ ಲಾಗಿದ್ದು, ವಿದ್ಯಾರ್ಥಿಗಳು ನಿರ್ಭೀತಿಯಿಂದ ಆಗಮಿಸಿ ಪರೀಕ್ಷೆ ಬರೆಯಬೇಕು ಎಂದು ಬಿಇಒ ಜಿ.ಇ. ರಾಜೀವ್ ಹೇಳಿದರು.
ತಾಲ್ಲೂಕಿನ ಕೂಲಂಬಿ-ಕುಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ಹೊನ್ನಾಳಿ ತಾಲ್ಲೂಕಿನಲ್ಲಿ 10 ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 6 ಮುಖ್ಯ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1,468 ಬಾಲಕರು, 1,410 ಬಾಲಕಿಯರು ಸೇರಿದಂತೆ ಒಟ್ಟು 2,878 ಫ್ರೆಷರ್ಸ್ ವಿದ್ಯಾರ್ಥಿಗಳು, 24 ಬಾಲಕರು, 11 ಬಾಲಕಿಯರು ಸೇರಿದಂತೆ ಒಟ್ಟು 35 ರಿಪೀಟರ್ಸ್ ವಿದ್ಯಾರ್ಥಿಗಳು, ತಾಲ್ಲೂಕಿನಿಂದ ವಲಸೆ ಬಂದ ವಿದ್ಯಾರ್ಥಿಗಳಲ್ಲಿ ಇಬ್ಬರು ಬಾಲಕಿಯರು, ವಿವಿಧ ಜಿಲ್ಲೆಗಳಿಂದ ವಲಸೆ ಬಂದ ವಿದ್ಯಾರ್ಥಿಗಳಲ್ಲಿ 42 ಬಾಲಕರು, 32 ಬಾಲಕಿಯರು ಸೇರಿದಂತೆ 74 ವಿದ್ಯಾರ್ಥಿಗಳ ನ್ನೊಳಗೊಂ ಡಂತೆ ಒಟ್ಟು 2,985 ವಿದ್ಯಾರ್ಥಿ ಗಳು 16 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದರು.