ಮಲೇಬೆನ್ನೂರು, ಜು.19- ದೇಶದಲ್ಲಿ ಕೊರೊನಾ 3ನೇ ಅಲೆಯ ಭೀತಿ ಇರುವುದರಿಂದ ಸರ್ಕಾರವು ಬಕ್ರೀದ್ ಹಬ್ಬದ ಪ್ರಾರ್ಥನೆಗೆ ಈದ್ಗಾ ಮೈದಾನದಲ್ಲಿ ಅವಕಾಶ ನೀಡಿಲ್ಲ ಎಂದು ಪಿಎಸ್‌ಐ ವೀರಬಸಪ್ಪ ಕುಸಲಾಪುರ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ನಾಗರಿಕ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಸೀದಿಗಳಲ್ಲಿ ಮಾತ್ರ 50 ಜನರಿಗೆ ಮೀರದಂತೆ ಆರು ಅಡಿಗಳ ಅಂತರ ಕಾಯ್ದುಕೊಂಡು ಕೋವಿಡ್ ನಿಯಮಗಳನ್ನು ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಉಳಿದವರು ತಮ್ಮ ತಮ್ಮ ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಹಬ್ಬ ಆಚರಿಸಬೇಕು. ಪುರಸಭೆ ಮಾಜಿ ಸದಸ್ಯ ಎ. ಆರೀಫ್ ಅಲಿ, ಯುಸೂಫ್ ಮಾತನಾಡಿದರು. ಪುರಸಭೆ ಮಾಜಿ ಸದಸ್ಯ ದಾದಾವಲಿ, ಅಯೂಬ್ ನಯಾಜ್, ಭಾಷಾ, ಜಾಮೀಯಾ ಮಸೀದಿಯ ಆಡಳಿತಾಧಿಕಾರಿ ಅಬ್ದುಲ್ ಲತೀಫ್ ಮತ್ತು ಇತರರು ಸಭೆಯಲ್ಲಿ ಭಾಗವಹಿಸಿದ್ದರು.